Breaking News

ಸರ್ಕಾರಿ ಶಾಲೆಗೆ ಮಕ್ಕಳನ್ನು ಕರೆದೊಯ್ಯಲು ಖಾಸಗಿ ಬಸ್ ಖರೀದಿಸಿದ ಪಾಲಕರು

Spread the love

ಕೊಪ್ಪಳ : ಸರ್ಕಾರಿ ಶಾಲೆಗಳು ಎಂದರೆ ಮೂಗು ಮುರಿಯುವವರೇ ಹೆಚ್ಚು. ಆದರೆ, ಗ್ರಾಮೀಣ ಭಾಗದಲ್ಲಿನ ಸರ್ಕಾರಿ ಶಾಲೆಯೊಂದು ಖಾಸಗಿ ಶಾಲೆಯನ್ನು ಮೀರಿಸುವಂತಿದೆ. ಈ ಶಾಲೆಗೆ ಸುತ್ತಲಿನ ಗ್ರಾಮದಿಂದ ಮಕ್ಕಳು ಬರುತ್ತಾರೆ. ಅವರಿಗೆ ಬಸ್ ಸೌಕರ್ಯವಿಲ್ಲ. ಅದಕ್ಕೆ ಪರ್ಯಾಯವಾಗಿ ಪಾಲಕರು ಶಾಲಾ ಮಕ್ಕಳಿಗಾಗಿ ಬಸ್ ಖರೀದಿಸಿದ್ದಾರೆ. ಅದು ಎಲ್ಲಿ ಎಂಬುವುದಕ್ಕೆ ಈ ವರದಿ ನೋಡಿ.

parents-bought-private-bus-to-take-their-children-to-government-school

ಇತ್ತೀಚಿನ ದಿನಗಳಲ್ಲಿ ಪಾಲಕರು ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸಲು ಹಿಂಜರಿಯುತ್ತಾರೆ. ಅದಕ್ಕೆ ಮೂಲ ಕಾರಣ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಕನಿಷ್ಠ ಮೂಲ ಸೌಲಭ್ಯ ಇಲ್ಲದಿರುವುದು. ಆದರೆ, ಜಿಲ್ಲೆಯ ಯಲಬುರ್ಗಾ ತಾಲೂಕಿನ ಬುಕನಟ್ಟಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇದಕ್ಕೆ ಅಪವಾದ ಎಂಬಂತಿದೆ.

ಯಲಬುರ್ಗಾ ತಾಲೂಕಿನ ಚಿಕ್ಕ ಗ್ರಾಮ ಬುಕನಟ್ಟಿ. ಈ ಗ್ರಾಮದಲ್ಲಿರುವ ಸರ್ಕಾರಿ ಶಾಲೆಗೆ ಬರುವ ಮಕ್ಕಳ ಸಂಖ್ಯೆ 100 ಗಡಿ ದಾಟಿದೆ. ಬುಕನಟ್ಟಿ ಗ್ರಾಮದ ಪಕ್ಕದ ಹಳ್ಳಿಗಳಾದ ಗುನ್ನಾಳ, ಬೊಮ್ಮನಾಳ, ಉಚ್ಚಲಕುಂಟಿ, ತಿಪ್ಪನಾಳ ಸೇರಿ ಹಲವು ಗ್ರಾಮಗಳಿಂದ ಈ ಶಾಲೆಗೆ ಓದಲು ಮಕ್ಕಳು ಬರುತ್ತಾರೆ. ಇಲ್ಲಿನ ಮಕ್ಕಳಿಗೆ ಬಸ್ ಸೌಕರ್ಯವಿಲ್ಲ. ಹೀಗಾಗಿ, ಶಾಲಾ ಮಕ್ಕಳಿಗಾಗಿ ಪಾಲಕರು ಬಸ್ ಖರೀದಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ