Breaking News

ಸಿಗ್ನಲ್‌ನಲ್ಲಿ ದಾರಿ ಬಿಡದಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಮೂವರಿಂದ ಹಲ್ಲೆ

Spread the love

ಬೆಂಗಳೂರು: ರಸ್ತೆ ಸಿಗ್ನಲ್‌ನಲ್ಲಿ ದಾರಿ ಬಿಡಲಿಲ್ಲ ಎಂದು ಫುಡ್​​ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಹಲ್ಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೋದಿ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದ್ದು, ಪೀಮ್‌ರಾಮ್ ಎಂಬಾತನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.

ರಾಜಸ್ಥಾನ ಮೂಲದ ಪೀಮ್‌ರಾಮ್ ನಗರದಲ್ಲಿ ಫುಡ್​​ ಡೆಲಿವರಿ ಎಕ್ಸಿಕ್ಯೂಟಿವ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಭಾನುವಾರ ರಾತ್ರಿ ಮೋದಿ ಆಸ್ಪತ್ರೆ ಬಳಿ ರೆಡ್ ಸಿಗ್ನಲ್ ಇದ್ದಾಗ ಬೈಕ್ ನಿಲ್ಲಿಸಿದ್ದ. ಈ ವೇಳೆ, ಹಿಂಬದಿಯಿಂದ ಬೈಕ್‌ನಲ್ಲಿ ಬಂದಿದ್ದ ಮೂವರು, ‘ದಾರಿ ಬಿಡು ನಾವು ಹೋಗುತ್ತೇವೆ’ ಎಂದಿದ್ದಾರೆ. ‘ಗ್ರೀನ್ ಸಿಗ್ನಲ್ ಬರಲಿ ಮುಂದೆ ಹೋಗುತ್ತೇನೆ’ ಎಂದು ಪೀಮ್‌ರಾಮ್ ಉತ್ತರಿಸಿದ್ದ. ಅಷ್ಟಕ್ಕೆ ಸಿಟ್ಟಿಗೆದ್ದ ಆರೋಪಿಗಳು ಪೀಮ್‌ರಾಮ್‌ನ ಮೇಲೆ ಹಲ್ಲೆ ಮಾಡಿದ್ದಾರೆ. ಆರೋಪಿಗಳ ಕೃತ್ಯದಿಂದ ಪೀಮ್‌ರಾಮ್‌ನ ಮುಖ, ತಲೆಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ‌.

ಪೀಮ್‌ರಾಮ್ ನೀಡಿರುವ ದೂರಿನ ಅನ್ವಯ ಬಸವೇಶ್ವರ ನಗರ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದ್ದು, ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ