Breaking News

ಪಂಚಮಸಾಲಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ಪ್ರಕರಣ: ಏಕ ಸದಸ್ಯ ಪಿಠದ ತನಿಖೆ ಆದೇಶ ಎತ್ತಿ ಹಿಡಿದ ಹೈಕೋರ್ಟ್

Spread the love

ಚಿಕ್ಕೋಡಿ (ಬೆಳಗಾವಿ) : ಕಳೆದ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಸಮಯದಲ್ಲಿ ಪಂಚಮಸಾಲಿ ಸಮಾಜದ ಪ್ರತಿಭಟನೆಕಾರರ ಮೇಲೆ ನಡೆಸಿದ ಲಾಠಿ ಚಾರ್ಜ್ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಹೈಕೋರ್ಟ್​ ದ್ವಿಸದಸ್ಯ ಪೀಠ ಎತ್ತಿ ಹಿಡಿದಿದೆ. ಈ ಮೂಲಕ ಸರ್ಕಾರದ ಅರ್ಜಿಯನ್ನು ಇತ್ಯರ್ಥಪಡಿಸಿದೆ. ಇದರಿಂದ ನಮಗೆ ಎರಡನೇ ಬಾರಿಗೆ ಕಾನೂನಾತ್ಮಕವಾಗಿ ಜಯ ಸಿಕ್ಕಿದೆ ಎಂದು ಕೂಡಲಸಂಗಮ ಪೀಠದ ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಗುರುವಾರ ತಡರಾತ್ರಿ ಮಾಧ್ಯಮದವರ ಜೊತೆ ಮಾತನಾಡುತ್ತಾ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಸರ್ಕಾರದ ಮುಂದೆ ಹೋರಾಟವನ್ನು ಮಾಡಿಕೊಂಡು ಬರಲಾಗಿತ್ತು. ಆದರೆ, ಕಳೆದ ಡಿಸೆಂಬರ್ 10, 2024 ರಂದು ಸುವರ್ಣ ವಿಧಾನಸೌಧ ಮುಂದೆ ನಮ್ಮ ಹೋರಾಟಗಾರ ಮೇಲೆ ಸಿಎಂ ಸಿದ್ದರಾಮಯ್ಯನವರ ಕುಮ್ಮಕ್ಕಿನಿಂದ ನಮ್ಮ ಸಮಾಜದ ಪ್ರತಿಭಟನಾಕಾರರ ಮೇಲೆ ಪೊಲೀಸರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಶಾಸಕರು ಅಧಿವೇಶನದಲ್ಲಿ ಧ್ವನಿ ಎತ್ತಿದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ವಕೀಲರ ಪರಿಷತ್ ಸದಸ್ಯರು ತಮಗೆ ಅನ್ಯಾಯವಾಗಿದೆ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ ಎಂದು ಹೈಕೋರ್ಟ್ ಮೊರೆ ಹೋಗಿದ್ದರು ಎಂದಿದ್ದಾರೆ.


Spread the love

About Laxminews 24x7

Check Also

ಕಾಗವಾಡದಲ್ಲಿ ನಾರಿಶಕ್ತಿ ಸಡಗರ ಸಂಭ್ರಮ ಶಾಸಕ ರಾಜು ಕಾಗೆ ಭಾಗಿ

Spread the love ಕಾಗವಾಡದಲ್ಲಿ ನಾರಿಶಕ್ತಿ ಸಡಗರ ಸಂಭ್ರಮ ಶಾಸಕ ರಾಜು ಕಾಗೆ ಭಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ