Breaking News

ಪಂಚಮಸಾಲಿ ಪೀಠಕ್ಕೆ ಜಡಿದಿದ್ದ ಬೀಗ ನಿನ್ನೆಯೇ ಓಪನ್​​: ಕಾಶಪ್ಪನವರ್, ಸ್ವಾಮೀಜಿ ಮಧ್ಯದ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್

Spread the love

ಬಾಗಲಕೋಟೆ, ಜುಲೈ 16: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ (Panchamasali Peetha) ಬೀಗ ಜಡಿದಿದ್ದು, ಹೊಸ ಚರ್ಚೆ ಹುಟ್ಟು ಹಾಕಿತ್ತು. ಇದು ಕಾಂಗ್ರೆಸ್‌ ನಾಯಕ ವಿಜಯಾನಂದ ಕಾಶಪ್ಪನವರ (Vijayanand Kashappanavar) ಮತ್ತು ಪಂಚಮಸಾಲಿ ಶ್ರೀಗಳ ಮಧ್ಯೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಇಂದು ಕೂಡ ಪೀಠದ ಎದುರು ಪೊಲೀಸ್ ಬಿಗಿಭದ್ರತೆ ಒದಗಿಸಲಾಗಿದ್ದು, ಪೀಠಕ್ಕೆ ಜಡಿದಿದ್ದ ಬೀಗವನ್ನು ನಿನ್ನೆಯೇ ತೆರೆಯಲಾಗಿದೆ. ಆ ಮೂಲಕ ಇಬ್ಬರ ಮಧ್ಯೆದ ಗುದ್ದಾಟ ತಾತ್ಕಾಲಿಕ ಸುಖಾಂತ್ಯ ಕಂಡಿದೆ.

ಕಳೆದ ನಾಲ್ಕು ದಿನದ ಹಿಂದೆಯೇ ಕೂಡಲ ಸಂಗಮದ ಪೀಠಕ್ಕೆ ಬೀಗ ಬಿದ್ದಿತ್ತು. ವಿವಾದ ತೀವ್ರಗೊಳ್ಳುತ್ತಿದ್ದಂತೆ ಪಂಚಮಸಾಲಿ ಸಮುದಾಯದ ಮುಖಂಡರು ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್​ ಅವರೊಂದಿಗೆ ಸಭೆ ಮಾಡಿ ಇದೀಗ ಪೀಠಕ್ಕೆ ಜಡಿದಿದ್ದ ಬೀಗವನ್ನು ತೆರೆದಿದ್ದಾರೆ. ಬಳಿಕ ವಿಜಯಾನಂದ ಕಾಶಪ್ಪನವರ್ ಮತ್ತು ಬಸವಜಯಮೃತ್ಯುಂಜಯ ಸ್ವಾಮೀಜಿ ಬೆಂಬಲಿಗರಿಂದ ಪೀಠದಲ್ಲಿ ಸಭೆ ಕೂಡ ಮಾಡಲಾಗಿದೆ. ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಜೊತೆಗೆ ವಿವಾದ ಹಿನ್ನಲೆ ಬಂದ ಆಗಿದ್ದ ಪೀಠದಲ್ಲಿರುವ ಕನ್ನಡ ಪ್ರಾಥಮಿಕ ಶಾಲೆ ಕೂಡ ಇದೀಗ ಆರಂಭಗೊಂಡಿದೆ.

ಪೊಲೀಸ್ ಭದ್ರತೆ

ಮಂಗಳವಾರ ಹುನಗುಂದ ಪಟ್ಟಣದಲ್ಲಿ ಪಂಚಮಸಾಲಿ ಸಮಾಜದ ಮುಖಂಡರ ಸಭೆ ಬಳಿಕ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ನಿನ್ನೆ ಸಂಜೆ ಪೀಠಕ್ಕೆ ಭೇಟಿ ನೀಡಿದ್ದರು. ಸ್ವಾಮೀಜಿ ಆಗಮಿಸಿದ್ದರಿಂದ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಸಮಾಜದ ಜನರು ಭೇಟಿಗೆ ಬರುತ್ತಿದ್ದಾರೆ. ಸದ್ಯ ಪೀಠಕ್ಕೆ ಹಾಗೂ ಸ್ವಾಮೀಜಿ ಸುರಕ್ಷತಾ ದೃಷ್ಟಿಯಿಂದ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ