ಇಂದು ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ
ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ
ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬೈಲಹೊಂಗಲ ಪುರಸಭೆಯ ಅಧ್ಯಕ್ಷರು ಮತ್ತು ಚುನಾಯಿತ ಪ್ರತಿನಿಧಿಗಳು, ಸಾರಿಗೆ ಇಲಾಖೆಯ ಎಲ್ಲಾ ಅಧಿಕಾರಿ ವರ್ಗದವರು ಪಟ್ಟಣದ ಗುರು ಹಿರಿಯರು ಉಪಸ್ಥಿತರಿದ್ದರು.