Breaking News

ಪ್ರಜ್ವಲ್ ರೇವಣ್ಣ ವಿರುದ್ಧದ ಆತ್ಯಾಚಾರ ಪ್ರಕರಣ: ಜುಲೈ 30 ರಂದು ಅಂತಿಮ ತೀರ್ಪು ಪ್ರಕಟ

Spread the love

ಬೆಂಗಳೂರು: ಅತ್ಯಾಚಾರ ಆರೋಪ ಸಂಬಂಧ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜುಲೈ 30ರಂದು ಅಂತಿಮ ತೀರ್ಪು ಪ್ರಕಟಿಸಲಿದೆ.

ನ್ಯಾ. ಸಂತೋಷ್ ಗಜಾನನ ಭಟ್ ಅವರು ಜುಲೈ 30 ರಂದು ತೀರ್ಪು ನೀಡಲಿದ್ದಾರೆ. ಎರಡು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದ ತೀರ್ಪು ಏನಾಗಲಿದೆ ಎಂಬುದರ ಬಗ್ಗೆ ತೀವ್ರ ಕುತೂಹಲ ಮೂಡಿದೆ.

ಒಂದು ವೇಳೆ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ ಗರಿಷ್ಠ ಜೀವಾವಧಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಮೈಸೂರಿನ ಕೆ.ಆರ್.ನಗರದ ಮಹಿಳೆ ಮೇಲೆ ಆತ್ಯಾಚಾರವೆಸಗಿದ ಆರೋಪದದಡಿ 2023ರಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಹಾಲಿ ಶಾಸಕ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಸೇರಿದಂತೆ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಐಡಿ ವಿಶೇಷ ತನಿಖಾ ತಂಡವು 2 ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಕಳೆದ ಮೇ 2 ರಿಂದ ನ್ಯಾಯಾಲಯವು ವಿಚಾರಣೆ ಆರಂಭಿಸಿತ್ತು. ಇದುವರೆಗೂ 26 ಮಂದಿ ಸಾಕ್ಷಿದಾರರ ವಿಚಾರಣೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 180 ದಾಖಲಾತಿಗಳನ್ನ ಸಲ್ಲಿಸಲಾಗಿದೆ. ನ್ಯಾಯಾಲಯವು ಅಂತಿಮ ತೀರ್ಪನ್ನು ಜುಲೈ 30 ರಂದು ಪ್ರಕಟಿಸಲಿದೆ ಎಂದು ಸರ್ಕಾರಿ ವಿಶೇಷ ಅಭಿಯೋಜಕ ಅಶೋಕ್ ನಾಯ್ಕ್ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ