Breaking News

ಚೀನಾ ಜೊತೆಗಿನ 900 ಕೋಟಿ ಒಪ್ಪಂದ ರದ್ದುಗೊಳಿಸಿದ ‘ಹೀರೋ’ಸೈಕಲ್

Spread the love

ನವದೆಹಲಿ: ಗಾಲ್ವಾನ ಕಣಿವೆ ಪ್ರದೇಶದಲ್ಲಿ ನಡೆದ ಭಾರತ ಮತ್ತು ಚೀನಾದ ನಡುವೆ ಸಂಘರ್ಷದ ಬಳಿಕ ದೇಶದಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ. ಕೇಂದ್ರ ಸರ್ಕಾರ 59 ಚೀನಾ ಆ್ಯಪ್‍ಗಳನ್ನು ನಿಷೇಧಿಸಿದ ಬೆನ್ನಲ್ಲೆ ಉದ್ಯಮಿದಾರರು ಸಹ ವೈರಿ ರಾಷ್ಟ್ರದ ಜೊತೆಗಿನ ವ್ಯವಹಾರಿಕ ಸಂಬಂಧವನ್ನು ಕಡಿತಗೊಳಿಸಿಕೊಳ್ಳುತ್ತಿದ್ದಾರೆ. ಇದೀಗ ಹೀರೋ ಸೈಕಲ್ ಕಂಪನಿ ಚೀನಾ ಜೊತೆಗಿನ 900 ಕೋಟಿ ವ್ಯವಹಾರವನ್ನ ರದ್ದುಗೊಳಿಸಿದೆ.

ಸೈಕಲ್ ತಯಾರಿಕೆಗಾಗಿ ಹೀರೋ ಕಂಪನಿ ಬಿಡಿ ಭಾಗಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿತ್ತು. ಈಗ ಪಂಜಾಬ್ ರಾಜ್ಯದ ಲೂಧಿಯಾನದ ಸಣ್ಣ ಕಂಪನಿಗಳಿಂದ ಬಿಡಿ ಭಾಗಗಳನ್ನು ತರಿಸಿಕೊಳ್ಳಲು ಹೀರೋ ಕಂಪನಿ ನಿರ್ಧರಿಸಿದೆ. ಮುಂದಿನ ತಿಂಗಳ ಒಪ್ಪಂದವನ್ನು ರದ್ದು ಮಾಡಿಕೊಂಡಿದ್ದರಿಂದ ಚೀನಾಗೆ ಅಂದಾಜು 900 ಕೋಟಿ ರೂ. ನಷ್ಟ ಸಂಭವಿಸಲಿದೆ.

ಜರ್ಮಿನಿಯಲ್ಲಿ ಚೀನಾ ತನ್ನ ಸ್ಥಾವರ ಸ್ಥಾಪಿಸಲು ಮುಂದಾಗಿದೆ. ಜರ್ಮನಿಯನ್ನು ವ್ಯಾಪಾರದ ಕೇಂದ್ರ ಬಿಂದುವನ್ನಾಗಿ ಮಾಡಿಕೊಳ್ಳುವ ಮೂಲಕ ವಿಶ್ವದ ಮಾರುಕಟ್ಟೆಯನ್ನು ವ್ಯವಹರಿಸಲು ಕಂಪನಿ ಪ್ಲಾನ್ ಮಾಡಿಕೊಂಡಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಹೀರೋ ಕಂಪನಿ ಸರ್ಕಾರಕ್ಕೆ 100 ಕೋಟಿ ರೂ.ಯನ್ನು ದಾನವಾಗಿ ನೀಡಿತ್ತು.

ಚೀನಾದ 59 ಆ್ಯಪ್ ಮಾಡುವ ಮೂಲಕ ನೆರೆಯ ವೈರಿ ರಾಷ್ಟ್ರಕ್ಕೆ ಶಾಕ್ ನೀಡಿರುವ ಪ್ರಧಾನಿ ಮೋದಿ, ಮತ್ತೊಂದು ಹೆಜ್ಜೆಯನ್ನು ಇರಿಸಿದ್ದಾರೆ. ದೇಶದ ಯುವ ಪೀಳಿಗೆ ದೇಶಿಯ ಆ್ಯಪ್ ತಯಾರಿಸುವ ಮೂಲಕ ಆತ್ಮನಿರ್ಭರ ಭಾರತದ ಜೊತೆ ಕೈ ಜೋಡಿಸಿ ಎಂದು ಕರೆ ನೀಡಿದ್ದಾರೆ.


Spread the love

About Laxminews 24x7

Check Also

ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,

Spread the loveಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ