Breaking News

ಕೃಷಿ ಹೊಂಡದಲ್ಲಿ ಮುಳುಗಿ ತಂದೆ – ಮಗ ದುರ್ಮರಣ

Spread the love

ಬೆಳಗಾವಿ: ಕೃಷಿ ಹೊಂಡದಲ್ಲಿ ಮುಳುಗಿ ತಂದೆ – ಮಗ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.

father-and-son-dies-in-savadatti-taluk-of-belagavi

ಘಟನೆ ವಿವರ: ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಬಸವರಾಜ ಕೆಂಗೇರಿ (40) ಹಾಗೂ ಪುತ್ರ ಧರೆಪ್ಪ ಬಸವರಾಜ ಕೆಂಗೇರಿ (14) ಮೃತರು. ಬಸವರಾಜ ಪತ್ನಿ ತವರೂರು ಮಳಗಲಿ ಗ್ರಾಮದಲ್ಲಿರುವ ಜಮೀನಿನಲ್ಲಿ ಸೋಯಾಬಿನ್ ಬೆಳೆಗೆ ಕೀಟನಾಶಕ ಸಿಂಪಡಿಸಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ನೀರು ತರಲು ಹೋಗಿದ್ದ ಬಸವರಾಜ ಪುತ್ರ ಧರೆಪ್ಪ, ಮತ್ತೋರ್ವ ಬಾಲಕ ಬಾಗಪ್ಪ ಸಣ್ಣಕ್ಕಿ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದಿದ್ದರು. ತಕ್ಷಣ ಇಬ್ಬರ ರಕ್ಷಣೆಗೆ ದೌಡಾಯಿಸಿದ ಬಸವರಾಜ ಮತ್ತು ಪುತ್ರ ಧರೆಪ್ಪ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಪೊಲೀಸರು ಮಾಹಿತಿ ನೀಡಿದ್ದಾರೆ.ಬದುಕುಳಿದ ಬಾಲಕ: ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸ್ಥಳೀಯರು ಮೂವರನ್ನು ನೀರಿನಿಂದ ಹೊರ ತೆಗೆದಿದ್ದರು. ಅಷ್ಟರೊಳಗೆ ತಂದೆ – ಮಗ ಸಾವನ್ನಪ್ಪಿದ್ದಾರೆ. ಬಾಗಪ್ಪ ಬದುಕುಳಿದಿದ್ದು, ಆತನನ್ನು ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.father-and-son-dies-in-savadatti-taluk-of-belagavi

ದುರಂತ ಹಿನ್ನೆಲೆಯಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯೇಕ ಘಟನೆ, ಮೂವರು ಯುವಕರು ನೀರುಪಾಲು: ಕಾವೇರಿ ನದಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಮೈಸೂರು ಜಿಲ್ಲೆಯ ಮೀನಾಕ್ಷಿಪುರ ಗ್ರಾಮದಲ್ಲಿ ಸಂಭವಿಸಿದೆ. ಮಂಡ್ಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಬಿಎಸ್​​​​​​ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಹಾವೇರಿಯ ಕೃಷ್ಣ (21), ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ ಗ್ರಾಮದ ಸಿದ್ದೇಶ್ (22) ಹಾಗೂ ಮೈಸೂರಿನ ಪಿರಿಯಾಪಟ್ಟಣದ ಪ್ರಶಾಂತ್(21) ಮೃತಪಟ್ಟಿವರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ