Breaking News

ರಾಜ್ಯದಲ್ಲಿ ಇಂದು 1839 ಜನರಿಗೆ ಕೊರೋನಾ

Spread the love

ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಇಂದು 1839 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 21549ಕ್ಕೆ ಏರಿಕೆಯಾಗಿದೆ. ಇವರಲ್ಲಿ 9244 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ 11966 ಆಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬೆಂಗಳೂರು ನಗರ – 1172, ದಕ್ಷಿಣ ಕನ್ನಡ – 75, ಬಳ್ಳಾರಿ – 73, ಬೀದರ್ – 51, ಧಾರವಾಡ – 45, ರಾಯಚೂರು – 41, ಮೈಸೂರು – 38, ಕಲಬುರ್ಗಿ ಮತ್ತು ವಿಜಯಪುರ – 37, ಮಂಡ್ಯ ಮತ್ತು ಉತ್ತರ ಕನ್ನಡ – 35, ಶಿವಮೊಗ್ಗ – 31, ಹಾವೇರಿ – 28, ಬೆಳಗಾವಿ – 27, ಹಾಸನ – 25, ಉಡುಪಿ – 18, ಚಿಕ್ಕಬಳ್ಳಾಪುರ ಮತ್ತು ತುಮಕೂರು – 12, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ – 11, ದಾವಣಗೆರೆ – 07, ಚಾಮರಾಜನಗರ – 05, ಗದಗ – 04, ಕೊಪ್ಪಳ ಮತ್ತು ಚಿಕ್ಕಮಗಳೂರು – 03, ರಾಮನಗರ – 02, ಯಾದಗಿರಿ – 01 ಕೊರೋನಾ ಕೇಸ್ ಪತ್ತೆಯಾಗುವ ಮೂಲಕ ಇಂದು 1839 ಜನರಿಗೆ ಕೊರೋನಾ ದೃಢಪಟ್ಟಿದೆ.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ