Breaking News

ರಾಯಚೂರು: ಊಟ ಸೇವನೆ ಬಳಿಕ ಹೊಟ್ಟೆನೋವು, ಒಂದೇ ಕುಟುಂಬದ ಮೂವರು ಸಾವು

Spread the love

ರಾಯಚೂರು, ಜುಲೈ 22: ಊಟ ಸೇವಿಸಿದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ರಾಯಚೂರು (Raichur) ಜಿಲ್ಲೆ ಸಿರವಾರ ತಾಲೂಕಿನ ಕೆ.ತಿಮ್ಮಾಪುರದಲ್ಲಿ (K Timmapur) ಸಂಭವಿಸಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ರಮೇಶ್(35), ಪುತ್ರಿ ನಾಗಮ್ಮ(8) ಮೃತಪಟ್ಟರೆ, ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ದೀಪಾ(6) ಸಾವಿಗೀಡಾಗಿದ್ದಾಳೆ. ಸದ್ಯ ರಮೇಶ್ ಅವರ​ ಪತ್ನಿ ಪದ್ಮಾರನ್ನು ರಿಮ್ಸ್​ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.

ಮತ್ತಿಬ್ಬರು ಮಕ್ಕಳಾದ ಕೃಷ್ಣ, ಚೈತ್ರಾಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕುಟುಂಬದವರೆಲ್ಲ ಸೋಮವಾರ ರಾತ್ರಿ ಚವಳಿಕಾಯಿ ಪಲ್ಯ, ರೊಟ್ಟಿ, ಅನ್ನ, ಸಾಂಬಾರ್ ಸೇವನೆ ಮಾಡಿದ್ದರು. ಊಟ ಮಾಡಿ ಮಲಗಿದ್ದ 6 ಜನರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಹೊಟ್ಟೆ ನೋವಿನಿಂದ ನರಳಾಡುತ್ತಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಂಜಾನೆ 4 ಗಂಟೆ ಸುಮಾರಿಗೆ ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ತಂದೆ ರಮೇಶ್, ಪುತ್ರಿ ನಾಗಮ್ಮ ಸಾವಿಗೀಡಾಗಿದ್ದಾರೆ. ಮತ್ತೋರ್ವ ಪುತ್ರಿ ದೀಪಾ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾಳೆ.

ಸದ್ಯ ಈ ಘಟನೆ ಕೆ.ತಿಮ್ಮಾಪುರ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ. ಕವಿತಾಳ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ

ಕ್ರಿಮಿನಾಶಕ‌ ಸಿಂಪಡಣೆ ಮಾಡಿದ್ದ ಚವಳೆಕಾಯಿ ತಿಂದಿರುವ ಶಂಕೆ

ಕ್ರಿಮಿನಾಶಕ‌ ಸಿಂಪಡಣೆ ಮಾಡಿದ್ದ ಚವಳೆಕಾಯಿ ತಿಂದಿರುವ ಕಾರಣ ಘಟನೆ ಸಂಭವಿಸಿರುವ ಬಗ್ಗೆ ಮೃತರ ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಹೊಲದಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಿರುವ ಮಾಹಿತಿ ಬೆಳಕಿಗೆ ಬಂದಿದೆ. ಹೊಲದಲ್ಲಿ ಬೆಳೆದಿದ್ದ ಚವಳೆಕಾಯಿ ಗಿಡಕ್ಕೆ ಕ್ರಿಮಿನಾಶಕ ಸಿಂಪಡಣೆ ಮಾಡಲಾಗಿತ್ತು. ಆ ಚವಳೆಕಾಯಿಯಲ್ಲೇ ಪಲ್ಯ ಮಾಡಿ ಸೇವಿಸಿರುವ ಅನುಮಾನ ಇದೆ ಎಂದು ರಾಯಚೂರಿನಲ್ಲಿ ಮೃತರ ಸಂಬಂಧಿ ತಿಮ್ಮಯ್ಯ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ