Breaking News

‘ನಾನೊಬ್ಬ ಪ್ರಾಮಾಣಿಕ ರಾಜಕಾರಣಿ, ಪ್ರಕರಣದಲ್ಲಿ ನನ್ನ ಸಿಲುಕಿಸುವ ಪ್ರಯತ್ನ’: ಶಾಸಕ ಬೈರತಿ ಬಸವರಾಜ್

Spread the love

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಆಲಿಯಾಸ್ ಬಿಕ್ಲು ಶಿವ ಹತ್ಯೆ ಆರೋಪ ಪ್ರಕರಣದ ಐದನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರು ಎರಡನೇ ಬಾರಿಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದರು.

ಪ್ರಕರಣದ ತನಿಖಾಧಿಕಾರಿ ಪ್ರಕಾಶ್ ರಾಥೋಡ್ ಅವರ ಮುಂದೆ ಶಾಸಕರು ಹಾಜರಾಗಿ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ಮತ್ತೊಂದೆಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ನೆರವು ನೀಡಿದ ಆರೋಪದಡಿ ಆಟೋ ಚಾಲಕ ಶಿವು ಎಂಬಾತನನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೂ ಪ್ರಕರಣದಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಚಾರಣೆ ಮುಗಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬೈರತಿ ಬಸವರಾಜ್, ತನಿಖಾಧಿಕಾರಿಗಳ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಮತ್ತೊಮ್ಮೆ ವಿಚಾರಣೆಗೆ ಬರುವಂತೆ ದಿನಾಂಕ ನಿಗದಿಪಡಿಸದೆ ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆ ಹಾಜರಾಗಿ ತನಿಖೆಗೆ ಸಹಕರಿಸುತ್ತೇನೆ ಎಂದರು

ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳು ಯಾರೆಂಬುದು ನನಗೆ ಗೊತ್ತಿಲ್ಲ. ಸಾಕಷ್ಟು ಜನರು ಬಂದು ನನ್ನ ಜೊತೆ ಫೋಟೊ ತೆಗೆಸಿಕೊಳ್ಳುತ್ತಾರೆ. ಕೊಲೆಯಾದ ಶಿವಪ್ರಕಾಶ್ ಆಗಲಿ, ಜಮೀನು ವಿಚಾರಗಳಾಗಲಿ ನನಗೆ ಗೊತ್ತಿಲ್ಲ. ಒಂದು ವೇಳೆ ಸಮಸ್ಯೆಯಿದ್ದಿದ್ದರೆ ಅವನು ನಮ್ಮ ಮನೆ ಬಳಿ ಬಂದು ಕೇಳಬೇಕಿತ್ತು ಎಂದು ಹೇಳಿದರು.

ನಾನೊಬ್ಬ ಪ್ರಾಮಾಣಿಕ ರಾಜಕಾರಣಿ. ನನ್ನ ಮೇಲಿನ ಆರೋಪ ರಾಜಕೀಯ ಪ್ರೇರಿತವಾಗಿದೆ. ಇದರ ಹಿಂದೆ ಕಾಣದ ಕೈಗಳಿವೆ. ದುರುದ್ದೇಶಪೂರ್ವಕವಾಗಿ ನನ್ನನ್ನು ಸಿಲುಕಿಸುವ ಯತ್ನ ಮಾಡಿದ್ಧಾರೆ. ಏನೇ ಮಾಡಿದರೂ ಕಾನೂನು ರೀತಿ ಎದುರಿಸುವ ಶಕ್ತಿ ನನಗಿದೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ