ನಾಳೆ ಬೆಳಗಾವಿಗೆ ಗಡಿ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಭೇಟಿ
ಬೆಳಗಾವಿ: ಗಡಿ ಉಸ್ತುವಾರಿ ಸಚಿವರಾಗಿ ಇತ್ತೀಚೆಗೆ ನೇಮಕಗೊಂಡಿರುವ ರಾಜ್ಯ ಕಾನೂನು ಮತ್ತು ಪ್ರವಾಸೋದ್ಯಮ ಖಾತೆಯ ಸಚಿವ ಶ್ರೀ ಎಚ್.ಕೆ.ಪಾಟೀಲ ಅವರು ಶನಿವಾರ ದಿ.26 ರಂದು ಗಡಿ ಉಸ್ತುವಾರಿ ಸಚಿವರಾಗಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಲಿದ್ದಾರೆ.
ಶನಿವಾರ ಸಂಜೆ 4 ಗಂಟೆಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ಸಂಘಟನೆಗಳ ಜೊತೆಗೆ ಸಚಿವರು ಸಭೆ ನಡೆಸಿ ಗಡಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ
ಚರ್ಚಿಸಲಿದ್ದಾರೆ. ಈ ಸಭೆಗೆ ಬೆಳಗಾವಿ ಜಿಲ್ಲೆಯ ಗಡಿಭಾಗದ ಕನ್ನಡ ಸಂಘಟನೆಗಳು
ಆಗಮಿಸಿ ಲಿಖಿತ ಮನವಿಗಳನ್ನು ಸಚಿವರಿಗೆ ಸಲ್ಲಿಸಬಹುದಾಗಿದೆ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.
Laxmi News 24×7