Breaking News

ಮೃತ್ಯುಕೂಪದಂತೆ ತೋರುತ್ತಿದೆ ಲೋಂಡಾಫಾಟಾ ರಸ್ತೆ…!!! ಗುಂಡಿಗಳಲ್ಲಿ ಕಾಣೆಯಾದ ರಸ್ತೆ!!!

Spread the love

ಮೃತ್ಯುಕೂಪದಂತೆ ತೋರುತ್ತಿದೆ ಲೋಂಡಾಫಾಟಾ ರಸ್ತೆ…!!!
ಗುಂಡಿಗಳಲ್ಲಿ ಕಾಣೆಯಾದ ರಸ್ತೆ!!!
ಬೆಳಗಾವಿ ಪಣಜಿ ಮಾರ್ಗದ ದುರಾವಸ್ಥೆ ಅಪಘಾತಕ್ಕೆ ಆಹ್ವಾನ ನೀಡುತ್ತಿದೆ. ಅಪಾಯಕಾರಿ ರಸ್ತೆಯ ಪರಿಸ್ಥಿತಿಯ ವಿರುದ್ಧ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತಾದ ಒಂದು ವಿಶೇಷ ವರದಿ ಇಲ್ಲಿದೆ ನೋಡಿ.
ಹೌದು, ಬೆಳಗಾವಿ ಪಣಜಿ ಹೆದ್ದಾರಿಯ ಲೋಂಡಾಫಾಟಾ ಹತ್ತಿರದ ರಸ್ತೆಯಲ್ಲಿ ಗುಂಡಿಗಳ ಸಾಮ್ರಾಜ್ಯವೇ ನಿರ್ಮಾಣವಾಗಿದ್ದು, ಪರಿಸ್ಥಿತಿ ಅತ್ಯಂತ ಭಯಂಕರವಾಗಿದೆ. ಮಳೆಯ ಹಿನ್ನೆಲೆ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿಗಳಲ್ಲಿ ನೀರು ತುಂಬಿಕೊಂಡಿದೆ.
ಅಭಿವೃದ್ಧಿ ಕಾಣದ ರಸ್ತೆಯ ತುಂಬ ಕೆಸರುಮಯ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸವಾರರು ಹಾಗೂ ಇದೇ ಮಾರ್ಗದ ಮೂಲಕ ಶಾಲೆಗೆ ತೆರಳುವ ವಿದ್ಯಾರ್ಥಿಗಳು ಕೈಯಲ್ಲಿ ಜೀವವನ್ನ ಹಿಡಿದುಕೊಂಡು ಪ್ರಯಾಣಿಸುವ ಪರಿಸ್ಥಿತಿ ಎದುರಾಗಿದೆ.
ಹಲವಾರು ಬಾರಿ ವಾಹನಗಳು ಸಿಕ್ಕಿ ಹಾಕಿಕೊಂಡು ಅಪಘಾತಗಳು ಕೂಡ ಸಂಭವಿಸುತ್ತಿವೆ. ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಕ್ಯಾರೆ ಎನ್ನುತ್ತಿಲ್ಲ.
ಹೆದ್ದಾರಿ ಪ್ರಾಧಿಕಾರವು ಯಾವುದೇ ಸೂಚನಾ ಫಲಕಗಳನ್ನು ಕೂಡ ಅಳವಡಿಸಿಲ್ಲ. ಇದರಿಂದಾಗಿ ವಾಹನ ಸವಾರರು ಗೊಂದಲಕ್ಕಿಡಾಗುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಡಿಯೋಣ ನಮ್ಮ ವರದಿಗಾರರಿಂದ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ