Breaking News

ಬೆಂಗಳೂರು: ಗಸ್ತಿನಲ್ಲಿದ್ದ ಕಾನ್ಸ್‌ಟೇಬಲ್ ಮೇಲೆ ಡ್ಯಾಗರ್‌ನಿಂದ ಹಲ್ಲೆ; ಅಪ್ರಾಪ್ತ ಸಹಿತ ನಾಲ್ವರ ಬಂಧನ

Spread the love

ಬೆಂಗಳೂರು: ಪೊಲೀಸ್​​​ ಹೆಡ್​​ ಕಾನ್ಸ್‌ಟೇಬಲ್​​ ಒಬ್ಬರ ಮೇಲೆ ಕಿಡಿಗೇಡಿಗಳು ಡ್ಯಾಗರ್‌ನಿಂದ ಹಲ್ಲೆಗೈದಿರುವ ಘಟನೆ ಚಾಮರಾಜಪೇಟೆಯ ವಾಲ್ಮೀಕಿನಗರದ 2ನೇ ಮುಖ್ಯರಸ್ತೆಯಲ್ಲಿ ನಡೆದಿದೆ.

ಜುಲೈ 26ರಂದು ರಾತ್ರಿ 9:30ರ ಸುಮಾರಿಗೆ ಘಟನೆ ನಡೆದಿದೆ. ಹೆಡ್ ಕಾನ್ಸ್‌ಟೇಬಲ್ ಸಂತೋಷ್​ ಅವರ ಎಡಗೈಗೆ ಗಂಭೀರ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಠಾಣೆ ಪೊಲೀಸರು ತಬ್ರೇಜ್, ಅಬ್ರೇಜ್, ಸಲ್ಮಾನ್ ಪಾಶಾ ಹಾಗೂ ಓರ್ವ ಅಪ್ರಾಪ್ತನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಮದ್ಯದ ನಶೆಯಲ್ಲಿ ಹಲ್ಲೆ: ಪಾನಮತ್ತ ಆರೋಪಿಗಳು ರಸ್ತೆಯಲ್ಲಿ ಗಲಾಟೆ ಮಾಡಿಕೊಳ್ಳುತ್ತಿರುವಾಗ ಗಸ್ತು ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್‌ಟೇಬಲ್​ ಸಂತೋಷ್​ ಗಮನಿಸಿದ್ದರು. ಜಗಳ ಬಿಡಿಸಲು ಹೋದಾಗ ಆರೋಪಿಗಳು ಸಂತೋಷ್ ಹಾಗೂ ಮತ್ತೋರ್ವ ಸ್ಥಳೀಯ ವ್ಯಕ್ತಿ ಮೊಹಮ್ಮದ್ ಶಫೀವುಲ್ಲಾ ಮೇಲೆ ಡ್ಯಾಗರ್‌ನಿಂದ ಹಲ್ಲೆಗೈದಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯಲ್ಲಿ ಸಂತೋಷ್ ಅವರ ಎಡಗೈಗೆ ಗಂಭೀರವಾದ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ‌.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ