ಬೈಲಹೊಂಗಲ ನಗರದ ಬಿ.ಬಿ. ಗಣಾಚಾರಿ ಕಲ್ಯಾಣ ಮಂಟಪದಲ್ಲಿ ನಡೆದ ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

‘ಯುವ ಪರ್ವ ಪ್ರತಿಜ್ಞೆ’ ಸಮಾರಂಭದಲ್ಲಿ ಭಾಗವಹಿಸಿ, ಪದಾಧಿಕಾರಿಗಳಿಗೆ ಶುಭಾಶಯಗಳನ್ನು ತಿಳಿಸಿದೆ.
ಯುವಕರು ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡು, ನಿಷ್ಠೆಯಿಂದ ಕೆಲಸ ಮಾಡಬೇಕಿದೆ. ಇಂದು ಬಿಜೆಪಿಯವರು ಪ್ರಚಾರದ ಮೂಲಕ ಜನರ ಗಮನ ಸೆಳೆಯುತ್ತಿದ್ದಾರೆ, ಆದರೆ ನಾವು ಕಾಂಗ್ರೆಸ್‌ನವರು ನಿಸ್ವಾರ್ಥವಾಗಿ ಕೆಲಸ ಮಾಡಿದರೂ ಅದರ ಬಗ್ಗೆ ಸಾಕಷ್ಟು ಪ್ರಚಾರವಾಗುತ್ತಿಲ್ಲ. ನಮ್ಮ ಸರ್ಕಾರ, ಸಚಿವರು ಹಾಗೂ ಶಾಸಕರು ನಿರ್ವಹಿಸುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸವನ್ನು ಯುವಕರು ನಡೆಸಬೇಕು. ಜನರ ಮನವೊಲಿಸಿ, ಪಕ್ಷವನ್ನು ತಳಮಟ್ಟದಿಂದ ಬಲಿಷ್ಠಗೊಳಿಸುವುದು ನಿಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದೆ.

2028ರ ವಿಧಾನಸಭಾ ಚುನಾವಣೆಗಳಿಗೆ ಇನ್ನೂ ಮೂರು ವರ್ಷಗಳ ಕಾಲಾವಕಾಶವಿದೆ. ಆದ್ದರಿಂದ ಇಂದಿನಿಂದಲೇ ಸಜ್ಜಾಗಬೇಕು. ಈ ಅವಧಿಯಲ್ಲಿ ನೀವು ಎಷ್ಟು ಜನರಿಗೆ ಹತ್ತಿರವಾಗುತ್ತೀರಿ, ಅವರ ಸಮಸ್ಯೆಗಳಿಗೆ ಎಷ್ಟು ಪರಿಣಾಮಕಾರಿಯಾಗಿ ಸ್ಪಂದಿಸುತ್ತೀರಿ ಎಂಬುದು ಮಹತ್ವದ ಅಂಶವಾಗಿದೆ.

ಕೇವಲ ಮುಖ್ಯಮಂತ್ರಿಗಳು ಅಥವಾ ಸಚಿವರು ಭೇಟಿನೀಡಿದಾಗ ಭಾವಚಿತ್ರ ಅಂಟಿಸುವಷ್ಟರಲ್ಲೇ ನಿಲ್ಲದೆ, ನಿಷ್ಠಾವಂತ ಸೇವಾ ಮನೋಭಾವದೊಂದಿಗೆ ಪಕ್ಷದಲ್ಲಿ ಕಾರ್ಯನಿರ್ವಹಿಸಿ. ಯಾರು ನಿಸ್ವಾರ್ಥವಾಗಿ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೋ ಅವರನ್ನು ಪಕ್ಷ ಖಂಡಿತವಾಗಿ ಗುರುತಿಸುತ್ತದೆ ಎಂಬುದನ್ನು ಎಲ್ಲರೂ ನೆನಪಿನಲ್ಲಿ ಇಡಬೇಕು.