Breaking News

ಜಾತಿಮಠಗಳಿಂದ ಸಮಾಜ ಕಲುಷಿತ: ಸ್ಪಷ್ಟನೆ ನೀಡಿದ ರಂಭಾಪುರಿ ಶ್ರೀ

Spread the love

ಚಿಕ್ಕಮಗಳೂರು, ಜುಲೈ 29: ರಂಭಾಪುರಿ ಶ್ರೀ (rambhapuri swamiji) ಅವರ ಜಾತಿ ಮಠಗಳಿಂದ ಸಮಾಜ ಕಲುಷಿತ ಎಂಬ ಹೇಳಿಕೆ ಸದ್ಯ ಕರ್ನಾಟಕದಲ್ಲಿ (Karnataka) ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕನಕ‌, ವಾಲ್ಮೀಕಿ, ಮಾದರ, ಭೋವಿ ಹೀಗೆ ಹತ್ತಾರು ಗುರುಪೀಠಗಳ ಸ್ವಾಮೀಜಿಗಳು ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರಂಭಾಪುರಿ ಶ್ರೀಗಳು ವಿಷಾದ ವ್ಯಕ್ತಪಡಿಸಿದ್ದು, ಇದು ನೋವಿನ ಸಂಗತಿ ಎಂದು ಹೇಳಿದ್ದಾರೆ.

ಸದ್ಯ ಈ ಕುರಿತಾಗಿ ಚಿಕ್ಕಮಗಳೂರು ಜಿಲ್ಲೆಯ ಎನ್​.ಆರ್​.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಪೀಠದಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಸುದ್ದಿಗೋಷ್ಠಿ ನಡೆಸಿದ್ದಕ್ಕೆ ವಿಷಾದಿಸುತ್ತೇನೆ, ಇದು ನೋವಿನ ಸಂಗತಿ. ಅವರವರ ಸಮುದಾಯದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪವಿಲ್ಲ. ಭದ್ರಾವತಿಯ ವೀರಶೈವ ಲಿಂಗಾಯತ ಕಾರ್ಯಕ್ರಮದಲ್ಲಿ ನಾವು ಧರ್ಮ ಪರಂಪರೆ, ಸಂಸ್ಕೃತಿ ಬಗ್ಗೆ ಮಾತನಾಡಿದ್ದೇನೆ. ಅನ್ಯ ಬೇರೆ ಯಾವುದೇ ಜಾತಿ ಕುರಿತು ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?

ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಠಿ ಮಾಡಿ ಕೆಲವು ಪತ್ರಿಕೆಗಳಲ್ಲಿ ಬಂದಿರುವ ವರದಿಯನ್ನು ಆಧರಿಸಿ ಭದ್ರಾವತಿಯಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು ಹೇಳಿದ್ದಾರೆಂಬ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ಕುರಿತು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಈ ಕೆಳಗಿನಂತೆ ಸ್ಪಷ್ಟನೆ ನೀಡಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ