Breaking News

ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಕ್ರಿಕೆಟಿಗ ಕುಸಾಲ್ ಮೆಂಡಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Spread the love

ಕೊಲಂಬೊ: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಕ್ರಿಕೆಟಿಗ ಕುಸಾಲ್ ಮೆಂಡಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇಂದು ಮುಂಜಾನೆ 5.30ರ ಸುಮಾರಿಗೆ ಪನುಡೊರಾದ ಹೊರೆತುದುವಾ ಪ್ರದೇಶದಲ್ಲಿ ಅಪಘಾತ ನಡೆದಿತ್ತು. ಈ ಘಟನೆಯಲ್ಲಿ ಸೈಕಲ್ ಸವಾರ 64 ವರ್ಷದ ವೃದ್ಧರೊಬ್ಬರು ಅಸುನೀಗಿದ್ದರು.

ಘಟನೆಗೆ ಸಂಬಂಧಿಸಿದಂತೆ ಉತ್ತರ ಪೊಲೀಸರು ಇಂದು ಕುಸಾಲ್ ಮೆಂಡಿಸ್ ಅವರನ್ನು ಬಂಧಿಸಿದ್ದಾರೆ. ಕ್ರಿಕೆಟಿಗನ ಬಂಧನ ವಿಷಯವನ್ನು ಪೊಲೀಸ್ ವಕ್ತಾರ ಜಲಿಯ ಸೇನರತ್ನೆ ಖಚಿತಪಡಿಸಿದ್ದಾರೆ.

25 ವರ್ಷ ಪ್ರಾಯದ ಕುಸಾಲ್ ಮೆಂಡಿಸ್ ಶ್ರೀಲಂಕಾ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಮತ್ತು ಬ್ಯಾಟ್ಸಮನ್. 2015ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಕುಸಾಲ್ ಮೆಂಡಿಸ್, ಇದುವರೆಗೆ 44 ಟೆಸ್ಟ್ ಮತ್ತು 76 ಏಕದಿನ ಪಂದ್ಯಗಳನ್ನಾಡಿದ್ದಾರೆ.

ಮೂರು ಮಾದರಿಯ ಕ್ರಿಕೆಟ್ ನಲ್ಲಿ ಮಿಂಚಿರುವ ಕುಸಾಲ್ ಮೆಂಡಿಸ್ ಸತತ ಎರಡು ವರ್ಷಗಳ ಕಾಲ ಶ್ರೀಲಂಕಾದ ವರ್ಷದ ಏಕದಿನ ಆಟಗಾರ ಪ್ರಶಸ್ತಿ ಜಯಿಸಿದ್ದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ