Breaking News

ಸ್ನೇಹಿತನ ಪಿಸ್ತೂಲ್‌ ಹಿಡಿದು ನೋಡುತ್ತಿದ್ದಾಗ ಹಾರಿದ ಗುಂಡು; ಕಿಡ್ನಿ ಕಳೆದುಕೊಂಡ ಯುವತಿ

Spread the love

ಬೆಂಗಳೂರು: ಪಿಸ್ತೂಲ್‌ನಿಂದ ಮಿಸ್​​ಫೈರ್ ಆದ ಗುಂಡು ತಗುಲಿ ಯುವತಿಯ ಒಂದು ಕಿಡ್ನಿಗೆ ತೀವ್ರ ಹಾನಿಯಾದ ಘಟನೆ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೇಚಲ್ (32) ಎಂಬವರು ಕಿಡ್ನಿ ಕಳೆದುಕೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪರವಾನಗಿ ಪಡೆದ ಪಿಸ್ತೂಲ್ ಹೊಂದಿದ್ದ ಈಕೆಯ ಸ್ನೇಹಿತನಾದ ನಿಖಿಲ್ ನಾಯಕ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023ರ 125ಬಿ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ 25 (1B), 27, 30ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕಾಕ್ಸ್ ಟೌನ್‌ನ ನಿವಾಸಿಯಾಗಿದ್ದ ರೇಚಲ್ ಜುಲೈ 28ರಂದು ರಾತ್ರಿ ಹೊರಮಾವು ಸಮೀಪದ ಆಶೀರ್ವಾದ ಕಾಲೊನಿಯಲ್ಲಿರುವ ನಿಖಿಲ್ ನಾಯಕ್‌ನ ಮನೆಗೆ ತೆರಳಿದ್ದರು. ನಿಖಿಲ್ ನಾಯಕ್ ಶೌಚಾಲಯಕ್ಕೆ ಹೋಗಿದ್ದಾಗ ರೇಚಲ್ ಆತನ ಪಿಸ್ತೂಲ್ ಹಿಡಿದು ನೋಡುತ್ತಿದ್ದಾಗ ಮಿಸ್​​ಫೈರ್ ಆಗಿದೆ. ಗುಂಡು ರೇಚಲ್‌ ಅವರ ಹೊಟ್ಟೆಗೆ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ನಿಖಿಲ್ ನಾಯಕ್ ಆಕೆಯನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ರೇಚಲ್ ಅವರ ಒಂದು ಕಿಡ್ನಿ ಹಾನಿಗೊಳಗಾಗಿದ್ದು, ವೈದ್ಯರು ತೆಗೆದು ಹಾಕಿದ್ದಾರೆ. ಇದೀಗ ರೇಚಲ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಆಕೆಯ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ