Breaking News

ಭಾರತೀಯ ಹಬ್ಬಗಳು ಭಾವೈಕ್ಯತೆ ಬೆಳೆಸುವ ಕೊಂಡಿ ಮಹಾಂತೇಶ ಕವಟಗಿಮಠ

Spread the love

*ಭಾರತೀಯ ಹಬ್ಬಗಳು ಭಾವೈಕ್ಯತೆ ಬೆಳೆಸುವ ಕೊಂಡಿ 😘
ಮಹಾಂತೇಶ ಕವಟಗಿಮಠ
ಭಾರತ ಸಂಸ್ಕೃತಿ, ಆಚಾರ ವಿಚಾರಗಳ ಬೀಡು. ಇಲ್ಲಿ ಬಡವನಾಗಲಿ ಶ್ರೀಮಂತನಾಗಲಿ ಎಲ್ಲರೂ ಭಕ್ತಿ ಪರಂಪರೆಯನ್ನು ಹೊಂದಿದ್ದಾರೆ. ಶತಶತಮಾನಗಳ ಪರಕೀಯರ ಆಳ್ವಿಕೆಯ ನಂತರವೂ ಇಲ್ಲಿ ಮೂಲ ಸಂಸ್ಕೃತಿ ಹಾಗೆ ಉಳಿದಿದೆ. ಇದಕ್ಕೆ ಮೂಲ ಕಾರಣ ಇಲ್ಲಿನ ವಿಶಿಷ್ಟ ಹಬ್ಬಗಳು. ಈ ಹಬ್ಬಗಳು ಪರಸ್ಪರರಲ್ಲಿ ಭಾವೈಕ್ಯತೆಯನ್ನು ಬೆಳೆಸುವ ಕೊಂಡಿಯಾಗಿವೆ ಎಂದು ವಿಧಾನ ಪರಿಷತ್ತಿನ ಮಾಜಿ ಸಚೇತಕ ಮಹಾಂತೇಶ ಕವಟಿಗಿಮಠ ಅಭಿಪ್ರಾಯಪಟ್ಟರು.
ಅವರು ಇತ್ತೀಚಿಗೆ ಇಲ್ಲಿನ ಶಿವಬಸವ ನಗರದ ಕಾರಂಜಿ ಮಠದಲ್ಲಿ ನಡೆದ 289ನೆಯ ಮಾಸಿಕ ಶಿವಾನುಭವ ಗೋಷ್ಠಿ ಹಾಗೂ ಪ್ರಥಮ ಶ್ರಾವಣ ಸೋಮವಾರದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ “ಭಾರತೀಯ ಸಂಸ್ಕೃತಿ ಹಾಗೂ ಹಬ್ಬಗಳ ಮಹತ್ವ” ಕುರಿತು ಅತಿಥಿ ಉಪನ್ಯಾಸ ನೀಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕ ಹಾಗೂ ದೇವಾಲಯಗಳ ಸಂವರ್ಧನಾ ಸಮಿತಿಯ ರಾಜ್ಯ ಸಂಯೋಜಕ ಮನೋಹರ ಮಠದ ಮಾತನಾಡಿ ಭಾರತವು ತನ್ನ ಶ್ರೀಮಂತ ಸಂಸ್ಕೃತಿ ಮತ್ತು ವೈವಿಧ್ಯಮಯ ಹಬ್ಬಗಳಿಗೆ ಹೆಸರುವಾಸಿಯಾಗಿದೆ. ಇಲ್ಲಿನ ಹಬ್ಬಗಳು ಕೇವಲ ಆಚರಣೆಗಳಲ್ಲ, ಬದಲಿಗೆ ಇವು ಸಮಾಜದ ಏಕತೆ, ಸಹೋದರತ್ವ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯ ಪ್ರತೀಕವಾಗಿವೆ ಎಂದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಕಾರಂಜಿ ಮಠದ ಗುರುಸಿದ್ಧ ಮಹಾಸ್ವಾಮಿಗಳು ಭಾರತೀಯ ಹಬ್ಬಗಳು ಧಾರ್ಮಿಕ ನಂಬಿಕೆಗಳು ಮತ್ತು ಆಚರಣೆಗಳ ಮೇಲೆ ಅವಲಂಬಿತವಾಗಿವೆ. ಇವು ಭಗವಂತನ ಆರಾಧನೆ ಮತ್ತು ಆಧ್ಯಾತ್ಮಿಕ ಉನ್ನತಿಗೆ ಅವಕಾಶ ನೀಡುತ್ತವೆ ಎಂದರು.
ಪ್ರಾರಂಭದಲ್ಲಿ ಕುಮಾರೇಶ್ವರ ಸಂಗೀತ ಪಾಠಶಾಲೆಯ ವಿದ್ಯಾರ್ಥಿಗಳು ವಚನ ಪ್ರಾರ್ಥನೆ ನೆರವೇರಿಸಿದರು. ಉಪನ್ಯಾಸಕ ಏ.ಕೆ. ಪಾಟೀಲ ಸ್ವಾಗತಿಸಿ ನಿರೂಪಿಸಿದರು. ಕೊನೆಗೆ ನ್ಯಾಯವಾದಿ ವಿ.ಕೆ. ಪಾಟೀಲ ವಂದಿಸಿದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ