Breaking News

ಮೈಸೂರಿನಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆ ಪ್ರಕರಣ: ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹೇಳಿದ್ದಿಷ್ಟು

Spread the love

ಮೈಸೂರು : ನಗರದ ಬನ್ನಿಮಂಟಪದ ಶೆಡ್​ನಲ್ಲಿ ಪತ್ತೆಯಾದ ಡ್ರಗ್ಸ್ ಪ್ರಕರಣ ಸಂಬಂಧ ಎಫ್​​ಐಆರ್ ದಾಖಲು ಮಾಡಿಕೊಂಡು ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿಂದು ಮನೆ ಮನೆಗೆ ಪೊಲೀಸ್ ಯೋಜನೆ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ, ಅವರು, ಮಹಾರಾಷ್ಟ್ರ ಹಾಗೂ ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬನ್ನಿಮಂಟಪ ಸಮೀಪದ ವರ್ತುಲ ರಸ್ತೆಯಲ್ಲಿದ್ದ ಗ್ಯಾರೇಜ್ ರೀತಿಯ ಶೆಡ್ ಮೇಲೆ ಕಳೆದ ಶನಿವಾರ ರಾತ್ರಿ ದಾಳಿ ಮಾಡಲಾಗಿದ್ದು, ಈ ವೇಳೆ ಸುಮಾರು ಕೋಟ್ಯಂತರ ಮೌಲ್ಯದ ಡ್ರಗ್ಸ್​ನ ಕಚ್ಚಾವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಬೃಹತ್​ ಡ್ರಗ್ಸ್ ಜಾಲ ಪತ್ತೆ ಬಳಿಕ ಕಳೆದ ಮೂರು ದಿನಗಳಿಂದ ಪೊಲೀಸರು ಸತತ ಕಾರ್ಯಾಚರಣೆ ನಡೆಸುತ್ತಿದ್ದು, ಮೂರು ದಿನಗಳಲ್ಲಿ 100 ಜನ ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ಅವರನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಅದರಲ್ಲಿ 60ಕ್ಕೂ ಹೆಚ್ಚು ಜನರ ವಿರುದ್ಧ ಕೇಸ್ ಹಾಕಲಾಗಿದ್ದು 6 ಜನ ಡ್ರಗ್ಸ್ ಮಾರಾಟಗಾರರನ್ನು ಬಂಧನ ಮಾಡಲಾಗಿದೆ ಎಂದು ಸೀಮಾ ಲಾಟ್ಕರ್ ಹೇಳಿದರು.

ಮೈಸೂರಿನಲ್ಲಿ ಪತ್ತೆಯಾದ ಈ ಡ್ರಗ್ಸ್​ನ ಮೌಲ್ಯ 381 ಕೋಟಿ ಎಂಬ ಮುಂಬೈ ಪೊಲೀಸರ ಪತ್ರಿಕಾ ಪ್ರಕಟಣೆಯ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು, ಕಾರ್ಯಾಚರಣೆ ವೇಳೆ 14.8 ಕೆಜಿ ಪೌಡರ್ ಸಿಕ್ಕಿದೆ. ಈ ಸಂದರ್ಭದಲ್ಲಿ ಡಬ್ಬದಲ್ಲಿ ಸಿಕ್ಕ ಡಿಸ್ಲೆರಿ ವಾಟರ್ ಅನ್ನು ಸಹ ಪೌಡರ್ ಅಂತ ತಿಳಿದಿರಬಹುದು. ಮಹಜರ್ ಕಾಪಿ ನಮ್ಮಲ್ಲೂ ಇದೆ. ಮುಂಬೈ ಪೊಲೀಸರ ಮಾಧ್ಯಮ ಪ್ರಕಟಣೆಯ ಬಗ್ಗೆ ಅವರನ್ನೇ ಕೇಳಬೇಕು ಎಂದ ಪೊಲೀಸ್ ಆಯುಕ್ತರು, ಡ್ರಗ್ಸ್ ಪತ್ತೆಯಾದ ಗ್ಯಾರೇಜ್​ ಮಾಲೀಕನ ವಿರುದ್ಧ ಹಾಗೂ ಪ್ರಕರಣದ ಬಗ್ಗೆ ನಮ್ಮಲ್ಲೂ ಎಫ್​ಐಆರ್​ ಆಗಿದೆ. ತನಿಖೆ ಮುಂದುವರೆಸುತ್ತಿದ್ದೇವೆ. ಸಾರ್ವಜನಿಕರು ಸಹ ಪೊಲೀಸರ ಜೊತೆ ಸಹಕರಿಸಬೇಕು ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ