Breaking News

ಧಾರವಾಡದಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಏಕಾಏಕಿ ಬಿದ್ದ ಮರ

Spread the love

ಧಾರವಾಡದಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಏಕಾಏಕಿ ಬಿದ್ದ ಮರ….ಧಾರವಾಡ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ತಪ್ಪಿದ ಅನಾಹುತ
ಚಲಿಸುತ್ತಿದ್ದ ಆಟೊ ಮೇಲೆ ಬೃಹತ್ ಮರವೊಂದು ಏಕಾಏಕಿ ಬಿದ್ದಿದ್ದು, ಚಾಲಕ ಹಾಗೂ ಆಟೊದಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆ ಪ್ರಾಣಾಪಾಯದಿಂದ ಪಾರಾದ ಘಟನೆ ಧಾರವಾಡದ ಸುಭಾಷ ರಸ್ತೆಯಲ್ಲಿ ಸಂಭವಿಸಿದೆ.
ಧಾರವಾಡದ ಸುಭಾಷ ರಸ್ತೆಯ ಮೂಲಕ ಆಟೊ ತೆರಳುತ್ತಿತ್ತು. ಈ ವೇಳೆ ರಸ್ತೆಯ ಪಕ್ಕ ಇದ್ದ ಮರ ಏಕಾಏಕಿ ಚಲಿಸುತ್ತಿದ್ದ ಆಟೊ ಮೇಲೆಯೇ ಬಿದ್ದಿದೆ. ಕೂಡಲೇ ಸ್ಥಳೀಯರು ಆಟೊದ ಒಳಗಿದ್ದ ಚಾಲಕ ಹಾಗೂ ವೃದ್ಧೆಯನ್ನು ಹೊರ ತೆಗೆದಿದ್ದಾರೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಧಾರವಾಡ ಸಂಚಾರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮರ ತೆರವುಗೊಳಿಸುವ ಕಾರ್ಯ ಮಾಡಿದರು. ಮರ ಬಿದ್ದ ಪರಿಣಾಮ ಆಟೊದ ಮೇಲ್ಭಾಗ ಜಖ್ಖಂಗೊಂಡಿದೆ.

Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ