ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಸೊಗಲ ಗ್ರಾಮದ ಶ್ರೀ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ನಿಂಗಪ್ಪ ಬಸಿಡೋಣಿ ದೊಡ್ಡಪ್ಪ ಸೋಮಾಪುರ ಉಮೇಶ್ ಪರ ಸನ್ನವರ್ ಸೋಮಪ್ಪ ಹಿಟ್ಟಣಗಿ ಯಲ್ಲಪ್ಪ ಸೋಮಾಪುರ ರಾಯಪ್ಪಾ ಸೊಗಲದ ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.
Laxmi News 24×7