Breaking News

ಮನೆಕೆಲಸದಾಕೆ ಮೇಲೆ ಅತ್ಯಾಚಾರ: ಮಧ್ಯಾಹ್ನ 2:45ಕ್ಕೆ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ

Spread the love

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಸಂಬಂಧ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಶಿಕ್ಷೆಯ ಪ್ರಮಾಣವನ್ನು ಮಧ್ಯಾಹ್ನ 2:45ಕ್ಕೆ ಪ್ರಕಟಿಸುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ.

ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರಿದ್ದ ನ್ಯಾಯಪೀಠ, ಸುದೀರ್ಘ ವಾದ ಆಲಿಸಿದ ಬಳಿಕ, ಮಧ್ಯಾಹ್ನ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಹೇಳಿದೆ.

ಪ್ರಕರಣದ ಹಿನ್ನೆಲೆ : ಮೈಸೂರಿನ ಕೆ.ಆರ್. ನಗರದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್​ಗಳಾದ 376(2)(ಎನ್), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66ಇ ಅಡಿ ಪ್ರಕರಣ ದಾಖಲಿಸಲಾಗಿತ್ತು.

ಈ ಸಂಬಂಧ ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2 ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಕಳೆದ ವರ್ಷದ ಅಂತ್ಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಜ್ವಲ್ ಮೊದಲ ಬಾರಿಗೆ ಸಂತ್ರಸ್ತೆಯ ಮೇಲೆ ಹಾಸನದ ಗನ್ನಿಗಢ ಫಾರ್ಮ್ ಹೌಸ್ ಮತ್ತು ಆನಂತರ ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ಅವರ ನಿವಾಸದಲ್ಲಿ ಬಲವಂತವಾಗಿ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದರು ಎಂದು ಆರೋಪಿಸಲಾಗಿತ್ತು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಬಳಿಕ ವಿದೇಶದಿಂದ ಹಿಂದಿರುಗುತ್ತಿದ್ದಂತೆ ಅವರನ್ನು 2024ರ ಮೇ 21ರಂದು ಎಸ್ಐಟಿ ಅಧಿಕಾರಿಗಳು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ