ಶಾಲೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರ ಜಿಲ್ಲೆಯ ಅಂಕಲಗಿ ಗ್ರಾಮದ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ 1000 ಕ್ಕಿಂತ ಅಧಿಕ ಮಕ್ಕಳಿದ್ದು
ಅಲ್ಲಿಯ ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಲೆಯ ಮುಂಭಾಗದಲ್ಲಿ ಹೋರಾಟ ನಡೆಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ ಘಟಕದ ಅಧ್ಯಕ್ಷ ಸಂಗಮೇಶ ಸಗರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಇನ್ನೂ ಪ್ರತಿಭಟನೆ ಹಿನ್ನಲೆಯಲ್ಲಿ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಎಲ್ಲಾ ಬೇಡಿಕೆಗಳನ್ನು ಬೇಡಿಕೆಗೆ ಅನುಗುಣವಾಗಿ ಹಂತ ಹಂತವಾಗಿ ಮಾಡುವುದಾಗಿ ಭರವಸೆ ನೀಡಿದರು .
ಬಳಿಕ ಹೋರಾಟಗಾರರು ವಾರದೊಳಗಾಗಿ ಬೇಡಿಕೆ ಇಡೇರದಿದ್ದರೆ ಮತ್ತೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು
Laxmi News 24×7