Breaking News

ಗಾಂಜಾ ಮಾರಾಟ ಪ್ರಕರಣದಲ್ಲಿ ನಾಲ್ವರ ಬಂಧನ… 1 ಲಕ್ಷ 72 ಸಾವಿರ ಮೌಲ್ಯದ ವಸ್ತುಗಳು ವಶ

Spread the love

ಗಾಂಜಾ ಮಾರಾಟ ಪ್ರಕರಣದಲ್ಲಿ ನಾಲ್ವರ ಬಂಧನ…
1 ಲಕ್ಷ 72 ಸಾವಿರ ಮೌಲ್ಯದ ವಸ್ತುಗಳು ವಶ
ಮಾದಕ ವಸ್ತುಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಒಟ್ಟು ನಾಲ್ವರನ್ನು ಬಂಧಿಸಿ ಒಟ್ಟು 1 ಲಕ್ಷ 72 ಸಾವಿರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದು ಕ್ರಮಕೈಗೊಂಡಿದ್ದಾರೆ.
ಬೆಳಗಾವಿಯ ಮಹಾದ್ವಾರ ರಸ್ತೆಯ ಸಂಭಾಜೀ ಗಲ್ಲಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಹೆರಾಯಿನ್ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ವೈಭವ ಕುರಣೆ ಮತ್ತು ಓಂಕಾರ್ ಜೋಶಿ ಎಂಬಾತನನ್ನು ಮಾರ್ಕೇಟ್ ಪಿ ಎಸ್ ಐ ಶಶಿಕುಮಾರ್ ಕುರಳೆ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿ ಒಟ್ಟು 18 ಸಾವಿರ ಮೌಲ್ಯದ 24.81 ಗ್ರಾಂ ಮೌಲ್ಯದ ಹೆರಾಯಿನ್ ವಶಕ್ಕೆ ಪಡೆದು ಕ್ರಮ ಕೈಗೊಳ್ಳಲಾಗಿದೆ.
ಇನ್ನು ಮಚ್ಛೆಯ ಸಾಯಿ ಕಾಲನಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಅತಿಫ್ ಮುಲ್ಲಾ ಮತ್ತು ಸೈಫಅಲಿ ಮಾಡಿವಾಲೆನನ್ನು ಗ್ರಾಮೀಣ ಪಿಐ ನಂದಿಶ್ವರ ಕುಂಬಾರ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ.
ಆರೋಪಿತರಿಂದ 40 ಸಾವಿರ ಮೌಲ್ಯದ 1 ಕೆಜಿ 366 ಗ್ರಾಂ ಗಾಂಜಾ, ಸಾವಿರ ರೂಪಾಯಿ ಹಣ, 20 ಸಾವಿರ ಮೌಲ್ಯದ ಐಫೋನ್, 53 ಸಾವಿರ ಮೌಲ್ಯದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ಪೊಲೀಸರ ಈ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತರು ಮತ್ತು ಉಪಾಯುಕ್ತರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ