Breaking News

ಕೋಟ್ಯಂತರ ರೂ. ಅವ್ಯವಹಾರ ಆರೋಪ, ಕೋಲಾರದಲ್ಲಿ ಪ್ರಕರಣ ದಾಖಲು

Spread the love

ಕೋಲಾರ, ಆಗಸ್ಟ್ 4: ವಿದ್ಯುತ್ ತಂತಿ ಹಾಗೂ ಬೆಲೆ ಬಾಳುವ ವಿದ್ಯುತ್ ಪರಿಕರಗಳನ್ನು ಕಳ್ಳತನ ಮಾಡಿ ಯಾವುದೇ ಟೆಂಡರ್ ಇಲ್ಲದೆ ಮಾರಾಟ ಮಾಡಿರುವ ಹಗರಣದ ಆರೋಪ ಬೆಸ್ಕಾಂ (BESCOM) ಅಧಿಕಾರಿಗಳು ಹಾಗೂ ಎಂಜಿನಿಯರ್​ಗಳ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಮೂವರು ಎಂಜಿನಿಯರ್‌ಗಳು ಸೇರಿದಂತೆ ಇತರೆ ಸಿಬ್ಬಂದಿ ವಿರುದ್ದ ಕೋಲಾರ (Kolar) ನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಬೆಸ್ಕಾಂ ಉಗ್ರಾಣದ ಎಂಜಿನಿಯರ್‌ಗಳಾದ ಕರಿಮುಲ್ಲಾ ಹುಸೇನಿ, ನಹೀದ್ ಪಾಷಾ, ಜನಾರ್ದನ್ ಹಾಗೂ ಮತ್ತಿತ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ ಸೇರಿದ ಕೋಲಾರ ಕಾರ್ಯನಿರ್ವಾಹಕ ಎಂಜಿನಿಯರ್ ಆಡಳಿತ ವಿಭಾಗದ ಬೆಂಗಳೂರು ಮುಖ್ಯರಸ್ತೆಯಲ್ಲಿರುವ ಉಗ್ರಾಣದಲ್ಲಿ 2.10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿದ್ಯುತ್ ಪರಿಕರ, ಸಾಮಗ್ರಿ ದರೋಡೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಅದಕ್ಕೆ ಬೇಕಾದ ಅಗತ್ಯ ವಿಡಿಯೋಗಳು ಸೇರಿದಂತೆ ಹಲವು ದಾಖಲೆಗಳನ್ನು ನೀಡಲಾಗಿದೆ.

ಉಗ್ರಾಣದಿಂದ ವಾಹನಗಳಲ್ಲಿ ವಸ್ತುಗಳನ್ನು ದರೋಡೆ ಮಾಡಿ ಮಾರಾಟ ಮಾಡಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ದೂರಿನಲ್ಲಿ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಒತ್ತಾಯಿಸಿದ್ದು, ಅದರಂತೆ ಪೊಲೀಸರು ದೂರು ದಾಖಲಿಸಿಕೊಂಡು ಬೆಸ್ಕಾಂ ವಿಭಾಗೀಯ ಕಚೇರಿಗೆ ಪ್ರಾಥಮಿಕ ವಿಚಾರಣೆಗೆ ನೋಟಿಸ್ ಕಳುಹಿಸಿದ್ದರು. ಆದರೆ, ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಸ್ಕಾಂ ಅವ್ಯವಹಾರ: ಆರೋಪಿಗಳು ನಾಪತ್ತೆ

ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಪ್ರಕರಣದಲ್ಲಿ ಮೂವರು ಎಂಜಿನಿಯರ್‌ಗಳ ಜೊತೆಗೆ 15 ಕ್ಕೂ ಹೆಚ್ಚು ಸಿಬ್ಬಂದಿ, ನೌಕರರು, ಹೊರಗುತ್ತಿಗೆ ಸಿಬ್ಬಂದಿ, ಸಂಸ್ಥೆಯ ವಾಹನ ಚಾಲಕರು ಶಾಮೀಲಾಗಿದ್ದಾರೆ. ಮಾತ್ರವಲ್ಲದೆ ಬೆಸ್ಕಾಂನ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ