Breaking News

ಇರುವ ಕ್ಯಾಂಟೀನ್ ನಿರ್ವಹಣೆ ಬಿಟ್ಟು 20 ಕೋಟಿ ರೂ. ವೆಚ್ಚದಲ್ಲಿ ಹೊಸ ಇಂದಿರಾ ಕ್ಯಾಂಟೀನ್​ಗಳ ಆರಂಭ?

Spread the love

ಬೆಂಗಳೂರು, ಆಗಸ್ಟ್ 5: ಬಡಜನರ ಅಕ್ಷಯ ಪಾತ್ರೆಯಂತಿದ್ದ ಇಂದಿರಾ ಕ್ಯಾಂಟೀನ್​ಗಳನ್ನು (Indira Canteens) ಸರಿಯಾಗಿ ನಿರ್ವಹಣೆ ಮಾಡದೇ ಸರ್ಕಾರ ಹಾಗೂ ಪಾಲಿಕೆ (BBMP) ಜನರ ಕೋಪಕ್ಕೆ ಗುರಿಯಾಗಿತ್ತು. ಇತ್ತ ರಾಜಧಾನಿ ಬೆಂಗಳೂರಿನ (Bengaluru) ಹಲವೆಡೆ ಇಂದಿರಾ ಕ್ಯಾಂಟೀನ್​ಗಳ ಬಿಲ್ ಬಾಕಿ ಉಳಿಸಿಕೊಂಡು ಕ್ಯಾಂಟೀನ್​ಗಳಿಗೆ ಬೀಗ ಬಿದ್ದಿತ್ತು. ಇರುವ ಇಂದಿರಾ ಕ್ಯಾಂಟೀನ್ ನಿರ್ವಹಣೆಯಲ್ಲೇ ಎಡವಿದ್ದ ಪಾಲಿಕೆ ಇದೀಗ ಹೊಸದಾಗಿ 52 ಕ್ಯಾಂಟೀನ್ ಆರಂಭಿಸಲು ಸಜ್ಜಾಗಿದೆ. ಬರೋಬ್ಬರಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಇಂದಿರಾ ಕ್ಯಾಂಟೀನ್​ಗಳ ನಿರ್ಮಾಣಕ್ಕೆ ಸಜ್ಜಾಗಿದೆ.

2017ರಲ್ಲಿ ವಾರ್ಡ್‌ಗೆ ಒಂದರಂತೆ 198 ಇಂದಿರಾ ಕ್ಯಾಂಟೀನ್‌ ಆರಂಭಿಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಸೂಕ್ತ ಜಾಗ ಸಿಗದ ಹಿನ್ನೆಲೆಯಲ್ಲಿ 174 ಸ್ಥಿರ ಹಾಗೂ 24 ಮೊಬೈಲ್‌ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಗಿತ್ತು. ಈ ಪೈಕಿ ಸದ್ಯ ಸುಮಾರು 160 ಇಂದಿರಾ ಕ್ಯಾಂಟೀನ್‌ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು ಇದೀಗ ಹೊಸ ಕ್ಯಾಂಟೀನ್ ನಿರ್ಮಿಸಲು ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ.

ಬಿಬಿಎಂಪಿಯ ವಾರ್ಡ್‌ ಸಂಖ್ಯೆ 198 ರಿಂದ 225ಕ್ಕೆ ಹೆಚ್ಚಾದ ಹಿನ್ನೆಲೆಯಲ್ಲಿ ಹೊಸ ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸುವಂತೆ ಸರ್ಕಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ 52 ಹೊಸ ಇಂದಿರಾ ಕ್ಯಾಂಟೀನ್‌ ಕಟ್ಟಡ ನಿರ್ಮಾಣಕ್ಕೆ ಬಿಬಿಎಂಪಿ ಮುಂದಾಗಿದೆ. ಸದ್ಯ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ಗುತ್ತಿಗೆದಾರರ ತಾಂತ್ರಿಕ ಅರ್ಹತೆ ಪರಿಶೀಲನೆ ಪೂರ್ಣಗೊಂಡಿದೆ. ಮುಂದಿನ ವಾರದಲ್ಲಿ ಟೆಂಡರ್‌ ಬಿಡ್‌ ಪರಿಶೀಲನೆ ಮಾಡಿ ಗುತ್ತಿಗೆದಾರರಿಗೆ ಕಾಮಗಾರಿ ಆರಂಭಿಸಲು ಸೂಚನೆ ನೀಡಲು ಸಿದ್ಧತೆ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ