ಬಗ್ಗೆಗುಡ್ಡ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಯಲ್ಲಮ್ಮ ದೇವಿಯ ದರ್ಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿವಾಸಕ್ಕೆ ಭೇಟಿ
ಬಗ್ಗೆಗುಡ್ಡ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿ
ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿಯ ದರ್ಶನ ಹಿನ್ನೆಲೆ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಭೇಟಿ
ಗುರುಗಳ ಆಶೀರ್ವಾದ ಪಡೆದ ಸಚಿವೆ ಹೆಬ್ಬಾಳ್ಕರ್
ಬಗ್ಗೆಗುಡ್ಡೆ ಗೌರಿಗದ್ದೆ ಆಶ್ರಮದ ಅವಧೂತರಾದ ಶ್ರೀ ವಿನಯ ಗುರೂಜಿ ಅವರು ಸುಕ್ಷೇತ್ರ ಸವದತ್ತಿಯ ಶ್ರೀ ಯಲ್ಲಮ್ಮ ದೇವಿಯ ದರ್ಶನಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ, ಸೋಮವಾರ ಸಂಜೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆಳಗಾವಿಯ ನಿವಾಸಕ್ಕೆ ಭೇಟಿನೀಡಿದರು.
ಈ ಸಂದರ್ಭ ಗುರೂಜಿಯವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅವರ ಕುಟುಂಬದ ಸದಸ್ಯರಿಗೆ ಆಶೀರ್ವಾದ ಸಲ್ಲಿಸಿದರು. ಈ ಭೇಟಿಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿದಂತೆ ಕುಟುಂಬದ ಇತರ ಸದಸ್ಯರು ಉಪಸ್ಥಿತರಿದ್ದರು.ಧಾರ್ಮಿಕ ಹಾಗೂ ಆಧ್ಯಾತ್ಮಿಕ ಶ್ರದ್ಧೆಯನ್ನು ಕೇಂದ್ರಬಿಂದುಗೊಳಿಸಿದ ಈ ಭೇಟಿ ಆತ್ಮೀಯತೆಯಿಂದ ಕೂಡಿತ್ತು.
Laxmi News 24×7