Breaking News

ಪೊಲೀಸರನ್ನು ಬೆಂಬಿಡದೆ ಕಾಡುತ್ತಿದೆ ಕೊರೊನಾ………

Spread the love

ಬೆಂಗಳೂರು: ಕೊರೊನಾ ಮಹಾಮಾರಿ ಪೊಲೀಸರನ್ನು ಬೆಂಬಿಡದೆ ಕಾಡುತ್ತಿದ್ದು, ಇಂದು ಒಟ್ಟು 8 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಹೊಡದಾಗಿ ಎರಡು ಪೊಲೀಸ್ ಠಾಣೆಗಳು ಸೀಲ್‍ಡೌನ್ ಆಗಿವೆ.

ಸಿಲಿಕಾನ್ ಸಿಟಿಯ ಮಲ್ಲೇಶ್ವರ ಹಾಗೂ ರಾಜಾಜಿ ನಗರ ಸಂಚಾರ ಪೊಲೀಸ್ ಠಾಣೆಗಳು ಸೀಲ್ ಪಟ್ಟಿಗೆ ಸೇರ್ಪಡೆಯಾಗಿದ್ದು, ನಗರದಲ್ಲಿ ಇಂದು ಒಟ್ಟು 8 ಜನರಿಗೆ ಸೋಂಕು ತಗುಲಿದೆ. ಮಲ್ಲೇಶ್ವರಂ ಠಾಣೆಯ ಇಬ್ಬರು ಸಿಬ್ಬಂದಿಗೆ ಕರೊನಾ ಸೋಂಕು ದೃಢಪಟ್ಟಿದ್ದು, 36 ವರ್ಷದ ಓರ್ವ ಕಾನ್ಸ್‍ಸ್ಟೇಬಲ್ ಮತ್ತು 35 ವರ್ಷದ ಓರ್ವ ಮಹಿಳಾ ಹೋಮ್‍ಗಾರ್ಡ್ ಗೆ ಕೊವಿಡ್-19 ಪಾಸಿಟಿವ್ ಬಂದಿದೆ. ಹೀಗಾಗಿ ಮಲ್ಲೇಶ್ವರ ಪೊಲೀಸ್ ಠಾಣೆಯನ್ನು ತಾತ್ಕಾಲಿಕವಾಗಿ ಸಿಬ್ಬಂದಿ ಸೀಲ್‍ಡೌನ್ ಮಾಡುತ್ತಿದ್ದಾರೆ.

ರಾಜಾಜಿನಗರ ಸಂಚಾರ ಠಾಣೆಗೂ ಕೊರೊನಾ ಎಂಟ್ರಿ ಕೊಟ್ಟಿದ್ದು, 54 ವರ್ಷದ ಹೆಡ್ ಕಾನ್ಸ್‍ಟೇಬಲ್‍ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೀಲ್‍ಡೌನ್ ಆದ ಠಾಣೆಗಳ ಪಟ್ಟಿಗೆ ರಾಜಾಜಿನಗರ ಸಂಚಾರ ಠಾಣೆ ಸೇರ್ಪಡೆಯಾಗಿದೆ. ಠಾಣೆಯ ಒಟ್ಟು 70 ಜನ ಪೊಲೀಸ್ ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ.

ಕೆ.ಜೆ.ಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಹ ಕೊರೊನಾ ಸ್ಫೋಟವಾಗುತ್ತಿದ್ದು, ಪೊಲೀಸ್ ಠಾಣೆಯ 5 ಜನರಿಗೆ ಪಾಸಿಟಿವ್ ಬಂದಿದೆ. ಈ ಮೂಲಕ ಕೆ.ಜೆ.ಹಳ್ಳಿ ಠಾಣೆಯ ಒಟ್ಟು 7 ಜನ ಠಾಣಾ ಸಿಬ್ಬಂದಿಗೆ ಪಾಸಿಟಿವ್ ಬಂದಂತಾಗಿದ್ದು, ಪೊಲೀಸರು ಭಯದಲ್ಲೇ ಕೆಲಸ ಮಾಡುವಂತಾಗಿದೆ. ಎಲ್ಲಿ ನಮಗೂ ಒಕ್ಕರಿಸಿಕೊಳ್ಳುತ್ತೋ ಎಂಬ ಭಯದಲ್ಲೇ ಪೊಲೀಸರು ಕೆಲಸ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ