Breaking News

ಸಿ.ಟಿ.ರವಿ ಮತ್ತು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಲಾಕ್‍ಡೌನ್ ನಮಗಲ್ಲ ಎಂಬಂತೆ ಸ್ಥಳೀಯ ಜನ ಪ್ರತಿನಿಧಿಗಳ ಜೊತೆ ಪ್ರವಾಸಿ ತಾಣಗಳಿಗೆ ಭೇಟಿ

Spread the love

ಚಿಕ್ಕಮಗಳೂರು: ಕೊರೊನಾ ಆತಂಕದಿಂದ ಇಡೀ ರಾಜ್ಯವೇ ಲಾಕ್‍ಡೌನ್ ಆಗಿದೆ. ಆದರೆ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಮತ್ತು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಲಾಕ್‍ಡೌನ್ ನಮಗಲ್ಲ ಎಂಬಂತೆ ಸ್ಥಳೀಯ ಜನ ಪ್ರತಿನಿಧಿಗಳ ಜೊತೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ.

ಸಚಿವ ಸಿ.ಟಿ.ರವಿ, ಮೂಡಿಗೆರೆ ಶಾಸಕ ಕುಮಾರಸ್ವಾಮಿ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ಸ್ಥಳಗಳಾದ ದೇವರಮನೆಗುಡ್ಡ, ಹೇಮಾವತಿ ನದಿ ಮೂಲ, ಬಲ್ಲಾಳರಾಯನ ದುರ್ಗಕ್ಕೆ ಭೇಟಿ ನೀಡಿದ್ದಾರೆ. ಈ ಮೂಲಕ ಸಾಮಾಜಿಕ ಅಂತರವನ್ನ ಸಂಪೂರ್ಣ ಗಾಳಿಗೆ ತೂರಿದ್ದಾರೆ. ಅದರಲ್ಲೂ ಜನಸಾಮಾನ್ಯರಿಗೆ ತಿಳಿ ಹೇಳಬೇಕಾದ ಶಾಸಕ ಕುಮಾರಸ್ವಾಮಿ ಮುಖಕ್ಕೆ ಮಾಸ್ಕ್ ಕೂಡ ಹಾಕಿಲ್ಲ.

ಸಚಿವರು ಹಾಗೂ ಶಾಸಕರ ಈ ನಡೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜನಸಾಮಾನ್ಯರು ಮನೆಯಿಂದ ಹೊರಬಂದರೆ ಪೊಲೀಸರು ಗಾಡಿಗಳನ್ನ ಅಡ್ಡ ಹಾಕಿ ಗಾಡಿಗಳನ್ನು ಸೀಜ್ ಮಾಡುವುದಾಗಿ ಎಚ್ಚರಿಕೆ ನೀಡುತ್ತಾರೆ. ಕೆಲವರು ಲಾಠಿ ಬೀಸುತ್ತಾರೆ. ಆದರೆ ಸಚಿವರು ಹಾಗೂ ಶಾಸಕರ ಈ ಕಾನೂನು ಉಲ್ಲಂಘನೆ ಬಗ್ಗೆ ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ಜನ ಪ್ರಶ್ನಿಸಿದ್ದಾರೆ.

ಪ್ರವಾಸಿ ತಾಣಗಳಿಗೆ ಸಚಿವರು ಹಾಗೂ ಶಾಸಕರ ಈ ಭೇಟಿಯ ಕಾರ್ಯಕ್ರಮದಲ್ಲಿ ಸುಮಾರು 30 ರಿಂದ 40 ಜನ ಭಾಗಿಯಾಗಿದ್ದರು. ಆದರೆ ಸಚಿವರು ಹಾಗೂ ಶಾಸಕರ ಎದುರು ಜನಪ್ರತಿನಿಧಿಗಳು ಸೇರಿದಂತೆ ಯಾರೊಬ್ಬರೂ ಕೂಡ ಸಾಮಾಜಿಕ ಅಂತರವನ್ನು ಪಾಲಿಸಿಲ್ಲ.

ಜನಸಾಮಾನ್ಯರು ಮುಖಕ್ಕೆ ಮಾಸ್ಕ್ ಹಾಕದಿದ್ದರೆ ಪೊಲೀಸರು 100 ರೂಪಾಯಿ ದಂಡ ಹಾಕುತ್ತಾರೆ. ಆದರೆ ಇವತ್ತು ಮೂಡಿಗೆರೆ ಶಾಸಕ ಕುಮಾರಸ್ವಾಮಿಯವರೇ ಸಾರ್ವಜನಿಕವಾಗಿ ಮುಖಕ್ಕೆ ಮಾಸ್ಕ್ ಹಾಕಿಲ್ಲ. ಅವರಿಗೂ ದಂಡ ಹಾಕುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಹಾಗಾದರೆ ರಾಜ್ಯದಲ್ಲಿ ಜನಪ್ರತಿನಿಧಿಗಳಿಗೆ ಒಂದು ಕಾನೂನು ಜನಸಾಮಾನ್ಯರಿಗೆ ಒಂದು ಕಾನೂನಾ ಎಂದು ಸಾರ್ವಜನಿಕರು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ