Breaking News

ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್​​ ಭೇಟಿ ಕೊಟ್ಟು ರೋಗಿಗಳು, ವೈದ್ಯರಿಂದ ಮಾಹಿತಿ ಪಡೆದ ಸಿಎಂ

Spread the love

ಬೆಂಗಳೂರು: ರಾಯಚೂರಿಗೆ ಹೋಗಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ದಿಢೀರನೇ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹವಾಮಾನ ವೈಪರೀತ್ಯದಿಂದಾಗಿ ರಾಯಚೂರು- ಕೊಪ್ಪಳ ಜಿಲ್ಲೆಗಳಲ್ಲಿ ಕೈಗೊಳ್ಳಬೇಕಾಗಿದ್ದ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ ಅವರು, ಬುಧವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರ ಜೊತೆ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಒಂದೂವರೆ ಗಂಟೆಗಳ ಕಾಲ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು.

ರೋಗಿಗಳ ಜತೆಯೂ ಮಾತನಾಡಿದ ಸಿಎಂ, ಆಸ್ಪತ್ರೆಯಲ್ಲಿ ಚಿಕಿತ್ಸೆ ಸರಿಯಾಗಿ ನೀಡುತ್ತಿದ್ದಾರಾ? ಚಿಕಿತ್ಸೆ ಚೆನ್ನಾಗಿದೆಯೇ, ವೈದ್ಯರು ಮತ್ತು ದಾದಿಯರು ನಿಮ್ಮ ಜೊತೆ ಸೌಮ್ಯವಾಗಿ ನಡೆದುಕೊಳ್ಳಿತ್ತಿದ್ದಾರಾ ಎಂದು ಕೇಳಿ ಮಾಹಿತಿ ಪಡೆದುಕೊಂಡರುವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಅಂಗಾಂಗ ಕಸಿ ಕೇಂದ್ರಕ್ಕೆ ಭೇಟಿ ನೀಡಿದ ಸಿಎಂ, ಯಾವ ಕಾಯಿಲೆಯಿಂದ ಇಲ್ಲಿಗೆ ಬಂದಿದ್ದೀರಿ, ಚಿಕಿತ್ಸೆ ಚೆನ್ನಾಗಿದೆಯೇ ಎಂದೆಲ್ಲ ಪ್ರಶ್ನಿಸಿದಾಗ ರೋಗಿಗಳು ಚಿಕಿತ್ಸೆ ಚೆನ್ನಾಗಿದೆ ಎಂದು ಪ್ರತಿಕ್ರಿಯಿಸಿದರು


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ