Breaking News

ಶಾಲಾ ಮಕ್ಕಳ ಸುರಕ್ಷತೆಗಾಗಿ ರಾಜ್ಯ ಸರ್ಕಾರದಿಂದ ಎಸ್​ಒಪಿ ಜಾರಿ: ಪಾಲಿಸಬೇಕಾದ ಪ್ರಮುಖ ಅಂಶಗಳಿವು

Spread the love

ಶಿವಮೊಗ್ಗ: ಇತ್ತೀಚೆಗೆ ಶಾಲೆಯಲ್ಲಿ ವಿದ್ಯಾರ್ಥಿಗಳು ಕುಡಿಯುವ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿದ ಪ್ರಕರಣಗಳು ಶಿವಮೊಗ್ಗ ಹಾಗೂ ಬೆಳಗಾವಿ‌ ಜಿಲ್ಲೆಯಲ್ಲಿ ನಡೆದಿದ್ದವು. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಿಗೆ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್​​ಒಪಿ)ಯನ್ನು ಜಾರಿಗೊಳಿಸಿದೆ.

ಈ ಎಸ್​​ಒಪಿ ಕುರಿತು ಶಿವಮೊಗ್ಗದ ಡಿಡಿಪಿಐ ಮಂಜುನಾಥ್​ ಅವರು ‘ಮಾಹಿತಿ ನೀಡಿದ್ದಾರೆ. ಹೊಸನಗರದ ಶಾಲೆಯೊಂದರಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಶಾಲೆಯಲ್ಲಿ ನೀರನ್ನು ಬಳಸುವಾಗ ಪ್ರಮಾಣಿತ ಕಾರ್ಯಾಚರಣಾ ವಿಧಾನ ಅನುಸರಿಸುವ ಕುರಿತು ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಎಸ್​​ಒಪಿಯಲ್ಲಿ ಪ್ರಮುಖ 9 ಅಂಶಗಳ ಬಗ್ಗೆ ಸೂಚನೆ ನೀಡಲಾಗಿದೆ. ಅದರ ಅನುಸಾರ ಬಿಸಿಯೂಟ, ಹಾಲು, ಮೊಟ್ಟೆ, ಬಾಳೆಹಣ್ಣು ವಿತರಣೆಯಲ್ಲಿ ಕ್ರಮಗಳನ್ನು ಅನುಸರಿಸಬೇಕು. ಈ ಬಗ್ಗೆ ಶಿಕ್ಷಕರು, ಅಡುಗೆ ತಯಾರಕರು ಹಾಗೂ ವಿದ್ಯಾರ್ಥಿಗಳಿಗೆ ಡಿಡಿಪಿಐ ಅವರು, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೂಲಕ ಎಸ್​​ಒಪಿ ಕಳುಹಿಸಿಕೊಟ್ಟಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ