Breaking News

ಬಿಜೆಪಿ-ಕಾಂಗ್ರೆಸ್ ನಾಯಕರ ಮೆಟ್ರೋ ಕ್ರೆಡಿಟ್ ವಾರ್: ಮೋದಿ ಮುಂದೆಯೇ ಲೆಕ್ಕ ಬಿಚ್ಚಿಟ್ಟ ಸಿದ್ದರಾಮಯ್ಯ

Spread the love

ಬೆಂಗಳೂರು, (ಆಗಸ್ಟ್ 10): ನಮ್ಮ ಮೆಟ್ರೋ ಹಳದಿ ಮಾರ್ಗ (Yellow metri Line) ಉದ್ಘಾಟನೆ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್ (BJP And BJP) ನಾಯಕರು ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ. ಅತಿ ಹೆಚ್ಚು ಪಾಲು ಮೋದಿ ನೇತೃತ್ವದ ಕೇಂದ್ರ ಸರ್ಕಾರದ್ದು ಎಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಿದ್ದರೆ, ಇದಕ್ಕೆ ಪ್ರತಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವರು ನಮ್ಮದೇ ಪಾಲು ಹೆಚ್ಚಿದೆ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಇದೀಗ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮುಂದೆಯೇ ರಾಜ್ಯ ಸರ್ಕಾರದ ಪಾಲು ಹೆಚ್ಚಿದೆ ಎಂದು ಲೆಕ್ಕಬಿಚ್ಚಿಟ್ಟರು.ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಆಡಿಟೋರಿಯಂನಲ್ಲಿ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ, ಮೆಟ್ರೋ 3ನೇ ಹಂತಕ್ಕೆ ಶಂಕುಸ್ಥಾಪನೆ ಹಾಗೂ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಕ್ಕೆ ಪ್ರಧಾನಿ ಮೋದಿಗೆ ಧನ್ಯವಾದ.

2005ರಲ್ಲಿ ಬೆಂಗಳೂರು ಮಟ್ರೋ ಕಾಮಗಾರಿ ಆರಂಭಿಸಲಾಗಿತ್ತು. ಮನಮೋಹನ್​ ಸಿಂಗ್ ಪ್ರಧಾನಿಯಾಗಿದ್ದಾಗ ಮೆಟ್ರೋ ಯೋಜನೆ ಆರಂಭಿಸಲಾಗಿದೆ. ಕೇಂದ್ರ ಸರ್ಕಾರ 50%, ರಾಜ್ಯ ಸರ್ಕಾರ 50% ಅನುದಾನ ನೀಡಬೇಕಿತ್ತು. ಆದ್ರೆ ರಾಜ್ಯ ಸರ್ಕಾರವೇ ಹೆಚ್ಚಿನ ಹಣ ಖರ್ಚು ಮಾಡುತ್ತಿದೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ