Breaking News

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ!

Spread the love

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮಾಚೋಹಳ್ಳಿಯಲ್ಲಿ ನಡೆದಿದೆ. ವಿಜಯ್ ಕುಮಾರ್ (39) ಹತ್ಯೆಗೀಡಾದ ಉದ್ಯಮಿ ಎಂದು ತಿಳಿದು ಬಂದಿದೆ. ಸೋಮವಾರ ಸಂಜೆ ಈ ಘಟನೆ ನಡೆದಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಕೆಲಸದ ನಿಮಿತ್ತವಾಗಿ ನಿನ್ನೆ ಸಂಜೆ ಮನೆಯಿಂದ ಹೊರಗೆ ಹೋದ ವಿಜಯ್ ಕುಮಾರ್​, ಮಾಚೋಹಳ್ಳಿಯ ಡಿ-ಗ್ರೂಪ್ ಲೇಔಟ್​ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನೆಲಮಂಗಲ ಬಳಿಯ ಕಡಬಗೆರೆ ಕ್ರಾಸ್​ನ ಜಯಪ್ರಿಯ ಅಪಾರ್ಟ್​ಮೆಂಟ್ ಬಳಿ ಈ ಘಟನೆ ನಡೆದಿದ್ದು, ಯಾರೋ ದುಷ್ಕರ್ಮಿಗಳು ವಿಜಯ್ ಕುಮಾರ್​ನ ಹತ್ಯೆ ಮಾಡಿ ಪರಾರಿಯಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ