Breaking News

ಶವ ಸಂಸ್ಕಾರಕ್ಕೆ ಬಳಸುವ ವಸ್ತುಗಳನ್ನು ಕದ್ದ ಖದೀಮರು

Spread the love

ಬಂಟ್ವಾಳ (ದಕ್ಷಿಣ ಕನ್ನಡ): ಮನೆ, ದೇವಸ್ಥಾನ, ಅಂಗಡಿ, ವಾಣಿಜ್ಯ ಕೇಂದ್ರಗಳಿಗೆ ಖದೀಮರು ಕನ್ನ ಹಾಕೋದನ್ನು ಕೇಳಿದ್ದೇವೆ. ಆದರೆ, ಇಲ್ಲಿ ರುದ್ರಭೂಮಿ (ಸ್ಮಶಾನ) ಯನ್ನು ಕಳ್ಳರು ಬಿಡದೇ, ಕೃತ್ಯ ಎಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದಲ್ಲಿ ನಡೆದಿದೆ.

ಸ್ಮಶಾನದಲ್ಲಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಕಳ್ಳತನ ಆಗಿರುವ ಬಗ್ಗೆ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾ.ಪಂ. ಅಧ್ಯಕ್ಷ ವಿಜಯ್ ತಿಳಿಸಿದ್ದು, ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂತ್ಯಸಂಸ್ಕಾರದ ವೇಳೆ ಬಳಸುವ ಲೋಹದ ವಸ್ತುಗಳ ಕಳ್ಳತನ: ಅಮ್ಟಾಡಿ ಗ್ರಾಮದ ದೇವಿನಗರ ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವ ಸುಡುವ ಸಿಲಿಕಾನ್ ಚೇಂಬರ್, ಹಿತ್ತಾಳೆಯ ನೀರಿನ ನಲ್ಲಿ, ಕಬ್ಬಿಣದ ಏಣಿ, ಕಬ್ಬಿಣದ ಗೇಟ್ ಹಾಗೂ ಇನ್ನಿತರ ಸುಮಾರು 4 ಲಕ್ಷ ಮೌಲ್ಯದ ಸೊತ್ತುಗಳನ್ನು ಕಳವು ಮಾಡಲಾಗಿದೆ.

ಶವ ಸಂಸ್ಕಾರಕ್ಕೆ ತೆರಳಿದಾಗ ಪ್ರಕರಣ ಬೆಳಕಿಗೆ: ಆಗಸ್ಟ್ 11 ರಂದು ಸ್ಥಳೀಯ ನಿವಾಸಿ ಐತ್ತಪ್ಪ ಪೂಜಾರಿ ಎಂಬವರ ಮೃತದೇಹ ದಹನ ಮಾಡಲು ರುದ್ರಭೂಮಿಗೆ ತೆರಳಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಅಮ್ಟಾಡಿ ಗ್ರಾಮ ಪಂಚಾಯತ್ ವತಿಯಿಂದ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ವಿಜಯ್ ಅವರು ತಿಳಿಸಿದ್ದಾರೆ.

ಗ್ರಾಮದಲ್ಲಿ ಹೆಚ್ಚುತ್ತಿರುವ ಕಳ್ಳತನ: ಅಮ್ಟಾಡಿ ಗ್ರಾಮದಲ್ಲಿ ಕೆಲವು ದಿನಗಳಿಂದ ಕಳ್ಳರ ಹಾವಳಿ ಕಂಡು ಬಂದಿದ್ದು, ಮನೆಯ ಹೊರಗಡೆ ನಿಲ್ಲಿಸಿರುವ ವಾಹನಗಳ ಸಹಿತ ಬೆಲೆ ಬಾಳುವ ವಸ್ತುಗಳ ಬಗ್ಗೆ ನಿಗಾ ವಹಿಸಿ ಜಾಗ್ರತೆಯಿಂದ ಇರುವಂತೆ ವಿಜಯ್ ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ. ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ