ಕಾಂಗ್ರೆಸ್ ಮುಖಂಡನ ಮೇಲೆ ಮಾ₹ ರಣಾಂತಿಕ ಹಲ್ಲೆ
ಚಿಕ್ಕೋಡಿ: ಮಾಜಿ ತಾಲೂಕು ಪಂಚಾಯತ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡನ ಮೇಲೆ ಮಾರ₹ ಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ.
ಮಾಜಿ ತಾಲೂಕು ಪಂಚಾಯತ ಸದಸ್ಯ ಹಾಗೂ ಕೈ ಮುಖಂಡ ರಾಜು ಪಾಟೀಲ್ ಮೇಲೆ ಖಾರದ ಪುಡಿ ಎರಚಿ ಮಾರ₹ ಣಾಂತಿಕ ಹಲ್ಲೆ ನಡೆಸಲಾಗಿದೆ. ಮುಗಳಿ ಗ್ರಾಮದ ಬಸ್ ನಿಲ್ದಾಣದ ಬಳಿ ರಾತ್ರಿ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಹಲ್ಲೆಯಿಂದ ಕೈ ಬೆರಳುಗಳು ಕ₹ಟ್ ತಲೆಗೆ ಗಂಭೀರ ಗಾಯಗಳಾಗಿದ್ದು ಚಿಕ್ಕೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ವೈಯಕ್ತಿಕ ಜಗಳ ಹಿನ್ನಲೆಯಲ್ಲಿ ಮುಗಳಿ ಗ್ರಾಮದ ಹೆಡ್ ಮಾಸ್ಟರ್ ಹಾಗೂ ಆತನ ಪುತ್ರನಿಂದ ಹಲ್ಲೆ ಮಾಡಿರುವ ಮಾಹಿತಿಯನ್ನ ಪೊಲೀಸರು ನೀಡಿದ್ದಾರೆ.
ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Laxmi News 24×7