Breaking News

ರಾಜಕೀಯದಲ್ಲಿ ಎಚ್ಚರಿಕೆಯಿಂದ ಇರಬೇಕು: ರಾಜಣ್ಣ ವಜಾ ಬಗ್ಗೆ ವ್ಯಾಖ್ಯಾನ ಮಾಡಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ.

Spread the love

ರಾಜಕೀಯದಲ್ಲಿ ಎಚ್ಚರಿಕೆಯಿಂದ ಇರಬೇಕು: ರಾಜಣ್ಣ ವಜಾ ಬಗ್ಗೆ ವ್ಯಾಖ್ಯಾನ ಮಾಡಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ.
ಕೆ.ಎನ್.ರಾಜಣ್ಣರನ್ನು ಸಂಪುಟದಿಂದ ವಜಾ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಹಗೆ ಸಾಧಿಸುತ್ತಾರೆ. ನಾವು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜಣ್ಣ ಅವರನ್ನು ವಜಾ ಮಾಡಿರುವುದು ಹೈಕಮಾಂಡ್ ನಿರ್ಧಾರ. ಈ ಬಗ್ಗೆ ರಾಜಣ್ಣ ಅವರೇ ಹೇಳಿದ್ದಾರೆ. ಹೈಕಾಂಡ್ ಬಳಿ ಹೋಗಿ ಅವರು ಮಾತನಾಡುತ್ತಾರೆ. ಅವರ ವಜಾ ಬಗ್ಗೆ ನಾನು ವ್ಯಾಖ್ಯಾನ ಮಾಡಲ್ಲ ಎಂದರು.
ರಾಜಣ್ಣ ವಜಾಗೊಳಿಸಿರುವುದು ಸಮುದಾಯಕ್ಕೆ ಮಾಡಿದ ಮೋಸ ಅಂತಾ ಹೇಳಲಾಗಲ್ಲ. ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರಿಗೆ ಹಗೆ ಇರುತ್ತದೆ. ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ರಾಜಣ್ಣ ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿಯಾಗುವುದಾಗಿ ಹೇಳಿದ್ದಾರೆ. ಆಗ ಎಲ್ಲವೂ ಸರಿ ಹೋಗಬಹುದು ಎಂದು ತಿಳಿಸಿದ್ದಾರೆ.
ಇನ್ನು ಇದು ನಮ್ಮ ಪಕ್ಷದ ನಿರ್ಧಾರ ವಿಪಕ್ಷಗಳು ಅನಗತ್ಯವಾಗಿ ಮಾತನಾಡುತ್ತಿದ್ದಾರೆ. ಸಿಎಂ ಸ್ಪಷ್ಟನೆ ಕೊಡಬಹುದು. ದೆಹಲಿ ಭೇಟಿ ಬಳಿಕ ಎಲ್ಲವೂ ತಿಳಿಯಾಗಬಹುದು. ರಾಜಕೀಯದಲ್ಲಿ ಹುಷಾರಾಗಿರಬೇಕು ಇಲ್ಲದಿದ್ದರೆ ಹೀಗಾಗುತ್ತದೆ ಎಂದಿದ್ದಾರೆ.

Spread the love

About Laxminews 24x7

Check Also

ರಾಜ್ಯಪಾಲರ ಭಾಷಣದ ಮೊದಲ 11 ಪ್ಯಾರಾಗಳಲ್ಲಿ ವಿಬಿ ಜಿ ರಾಮ್​ ಜಿ ಕಾಯ್ದೆ ಟೀಕಿಸಿ ಕೇಂದ್ರ ಸರ್ಕಾರದ ವಿರುದ್ಧ ಕಟು ಟೀಕೆ

Spread the loveಬೆಂಗಳೂರು : ರಾಜ್ಯಪಾಲರು ಹಾಗೂ ಸರ್ಕಾರದ ಸಂಘರ್ಷದ ಮಧ್ಯೆ ರಾಜ್ಯಪಾಲರ ಭಾಷಣವನ್ನು ಸದನದಲ್ಲಿ ಮಂಡಿಸಲಾಯಿತು. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ