Breaking News

:ಸ್ಥಳೀಯಜನಪ್ರತಿನಿಧಿಗಳ ಗೌರವಧನ ಕುರಿತು ಸದನದಲ್ಲಿ ಚರ್ಚಿಸಿದ ಎಮ್‌ಎಲ್‌ಸಿ ಸುನೀಲಗೌಡ ಪಾಟೀಲ

Spread the love

ವಿಜಯಪುರ :ಸ್ಥಳೀಯ ಜನಪ್ರತಿನಿಧಿಗಳ ಗೌರವಧನ ಕುರಿತು ಸದನದಲ್ಲಿ ಚರ್ಚಿಸಿದ ಎಮ್‌ಎಲ್‌ಸಿ ಸುನೀಲಗೌಡ ಪಾಟೀಲ
: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಮೇಯರ್, ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವ ಕುರಿತು ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮಾಡಿದ ಮನವಿಗೆ ಸಭಾಪತಿ ಬಸವರಾಜ ಹೊರಟ್ಟಿ ಒಪ್ಪಿಗೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ ಅಧಿವೇಶನದಲ್ಲಿ ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸುನೀಲಗೌಡ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂ ಖಾನ್ ಅವರು ಲಿಖಿತ ಉತ್ತರ ನೀಡಿದ್ದರು.
ಈ ಉತ್ತರಕ್ಕೆ ತೃಪ್ತರಾಗದ ಶಾಸಕರು, ಕೇರಳ, ಹರಿಯಾಣ, ತಮಿಳನಾಡು, ತೆಲಗಾಂಣ ಹಾಗೂ ಮದ್ಯಪ್ರದೇಶ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನೀಡಲಾಗುತ್ತಿರುವ ಗೌರವಧನ ಅತೀ ಕಡಿಮೆ ಇದೆ. ಬೆಲೆ ಏರಿಕೆಯ ಈ ದಿನಗಳಲ್ಲಿ ಸಚಿವರು, ಶಾಸಕರು ಹಾಗೂ ಸರಕಾರಿ ನೌಕರರ ವೇತನ ಹೆಚ್ಚಿಸಲಾಗಿದೆ.
ಆದರೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರಿಗೆ ಕಳೆದ ಒಂಬತ್ತು ವರ್ಷಗಳಿಂದ ಗೌರವಧನ ಹೆಚ್ಚಳ ಮಾಡಿಲ್ಲ. ಆದ್ದರಿಂದ ಕೂಡಲೇ ಗೌರವಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು. ಕಳೆದ ಮೂರು ಅಧಿವೇಶನಗಳಲ್ಲಿ ನಾನು ಕೇಳಿದ ಈ ಪ್ರಶ್ನೆಗೆ ಅದೇ ಉತ್ತರ ನೀಡಲಾಗುತ್ತಿದೆ.
ಈ ಬಾರಿಯೂ ಆರ್ಥಿಕ ಇಲಾಖೆ ಗೌರವಧನ ಹೆಚ್ಚಳಕ್ಕೆ ಒಪ್ಪಿಲ್ಲ ಎಂದು ಸಚಿವರು ಉತ್ತರಿಸಿದ್ದಾರೆ ಎಂದು ಶಾಸಕರು ಗಮನ ಸೆಳೆದರು. ಇದಕ್ಕೆ ಶಾಸಕರು ಪಕ್ಷಾತೀತವಾಗಿ ದ್ವನಿಗೂಡಿಸಿದರು.

Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ