ಮಳೆಯನ್ನು ಲೆಕ್ಕಿಸದೆ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ*
ಮಳೆಯನ್ನು ಲೆಕ್ಕಿಸದೇ ಆಶಾ ಕಾರ್ಯಕರ್ತೆಯರು ಮಂಗಳವಾರ ಪ್ರತಿಭಟನೆ ನಡೆಸಿದರು. ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಸಾಯಂಕಾಲ ಪ್ರತಿಭಟನೆ ನಡೆಸಿದರು. ಹತ್ತು ಸಾವಿರ ಗೌರವ ಧನ ನೀಡಬೇಕು,
ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು. ನಗರ ಆಶಾಳಿಗೆ 2 ಸಾವಿರ ಗೌರವ ಧನ ಹೆಚ್ಚಳ ಮಾಡಿ ಹೀಗೆ ಹಲವು ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಮಳೆಯನ್ನು ಲೆಕ್ಕಿಸದೇ ಪ್ರತಿಭಟನೆ ನಡೆಸಿದರು. ಇನ್ನೂ ಬೇಡಿಕೆ ಈಡೇರಿವರೆಗೂ ಇಲ್ಲಿಂದ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು.
ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಹಾಗೂ ತುಟ್ಟಿಬತ್ತಿ ನೀಡಬೇಕು ಎಂದು ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಆಶಾ ಕಾರ್ಯಕರ್ತೆಯರಿಗೆ 12, 000 ರೂಪಾಯಿ ವೇತನ ನೀಡುತ್ತೇನೆ ಎಂದು ಮಾತು ತಪ್ಪಿದ್ದಾರೆ. ಹೀಗಾಗಿ ಕೂಡಲೇ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.
Laxmi News 24×7