Breaking News

ವಾಲ್ಮೀಕಿ ಸಮುದಾಯದವರನ್ನೇ ಸಂಪುಟಕ್ಕೆ ಸೇರಿಸಲು ಒತ್ತಾಯಿಸಲು ದೆಹಲಿಗೆ ಹೋಗುತ್ತೇವೆ: ಸಚಿವ ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು: ಇಬ್ಬರು ವಾಲ್ಮೀಕಿ ಸಮುದಾಯದವರನ್ನೇ ಸಂಪುಟದಿಂದ ಕೈ ಬಿಡಲಾಗಿದೆ. ವಾಲ್ಮೀಕಿ ಸಮುದಾಯದವರನ್ನೇ ಸಂಪುಟಕ್ಕೆ ಸೇರಿಸಲು ಒತ್ತಾಯಿಸಲು ನಾವು ದೆಹಲಿಗೆ ಹೋಗುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿದ ಹಿನ್ನೆಲೆ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಮುದಾಯದ ಶಾಸಕರು, ಕೈ ನಾಯಕರು ಸಭೆ ನಡೆಸಿದರು. ಸಭೆಯಲ್ಲಿ ಶಾಸಕರಾದ ಬಸವಂತಪ್ಪ, ಅನಿಲ್ ಚಿಕ್ಕಮಾಧು, ಬಿ.ಎಂ.ನಾಗರಾಜ್, ರಘಮೂರ್ತಿ, ಗಣೇಶ ಪ್ರಸಾದ್, ಹರೀಶ್​ ಗೌಡ ಪಾಲ್ಗೊಂಡಿದ್ದರು. ಕೆ.ಎನ್.ರಾಜಣ್ಣ ಜೊತೆ ಶಾಸಕರು ಚರ್ಚೆ ನಡೆಸಿದರು.

ಸಭೆಯ ಬಳಿಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣಗೆ ಧೈರ್ಯ ಹೇಳಿದ್ದೇವೆ. ಬೇಸರ ಏನಿಲ್ಲ, ದೆಹಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ದೆಹಲಿಗೆ ನಿಯೋಗ ಹೋಗುವುದು ಬೇರೆ, ಅವರು ಹೋಗುವುದು ಬೇರೆ, ಷಡ್ಯಂತ್ರ ಇದೆ ಸಮಯ ಬಂದಾಗ ಹೇಳುತ್ತೇನೆ ಅಂತ ಹೇಳಿರೋದು ಅವರಿಗೆ ಬಿಟ್ಟ ವಿಚಾರ. ಸಮುದಾಯದ ಹೋರಾಟ ಬೇರೆ, ಪಾರ್ಟಿ ಬೇರೆ. ಷಡ್ಯಂತ್ರದ ಬಗ್ಗೆ ಅವರು ಯಾವಾಗ ಹೇಳ್ತಾರೆ ಅನ್ನೋದನ್ನ ಕಾದು ನೋಡೋಣ ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ