ಧಾರವಾಡದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ…. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಧರಣಿ.
: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಆಶಾ ಕಾರ್ಯಕರ್ತೆಯರು ಧಾರವಾಡದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆ ಧರಣಿ ನಡೆಸುತ್ತಿದ್ದಾರೆ.
ಸಿಎಂ ಅವರು ಆಶಾ ಕಾರ್ಯಕರ್ತೆಯರಿಗೆ ಘೋಷಣೆ ಮಾಡಿದ್ದ ಗೌರವ ಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿ ಮಾಸಿಕ ಕನಿಷ್ಠ 10 ಸಾವಿರ ರೂಪಾಯಿ ನೀಡಲೇಬೇಕು ಎಂದು ಆಗ್ರಹಿಸಿದರು.
ನಮ್ಮ ಬೇಡಿಕೆಗಳ ಈಡೇರಿಸದಿದ್ದಲ್ಲಿ ನಮ್ಮ ಅಹೋ ರಾತ್ರಿ ಧರಣಿ ಸತ್ಯಾಗ್ರಹ ನಿಲ್ಲುವುದಲ್ಲಿ ಎಚ್ಚರಿಕೆ ನೀಡಿದ್ದರು.