ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಂಘದಿಂದ ಕಳೆದ ಮೂರು ವರ್ಷದಿಂದ ರೈತರಿಗೆ ಬೆಳೆ ಸಾಲ ನೀಡದಿರುವುದನ್ನು ಖಂಡಿಸಿ ಕಳೆದ ನಾಲ್ಕು ದಿನದಿಂದ ಇಲ್ಲಿನ ಗ್ರಾಮಸ್ಥ ಸಚಿನ್ ಪಾಟೀಲ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಮುತಗಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನಲ್ಲಿ ರೈತರಿಗೆ ಬೆಳೆಸಾಲ ನೀಡುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳಿಗೆ ಕೇಳಿದರೆ ಡಿಸಿಸಿ ಬ್ಯಾಂಕ್ ನಿಂದ ಬಂದಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ ಎನ್ನುವ ಆರೋಪ ಸಚಿನ ಮಾಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿನ ಪಾಟೀಲ್ ಮುತಗಾ ಪ್ರಾಥಮಿಕ ಕೃಷಿ ಪತ್ತಿನ ಸಂಘದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಇಲ್ಲಿನ ಗ್ರಾಪಂ ಅಧಿಕಾರಿಗಳು ಕಳೆದ ಮೂರು ವರ್ಷಗಳಿಂದ ರೈತರಿಗೆ ಬೆಳೆಸಾಲ ನೀಡಿಲ್ಲ.
ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಜಿಲ್ಲೆಯ ರೈತರಿಗೆ ಸಾಲ ನೀಡಿರುವುದಾಗಿ ಘೋಷಣೆ ಮಾಡಿದೆ. ಆದರೆ ಮುತಗಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಂಘದಿಂದ ಕಳೆದ ಮೂರು ವರ್ಷದಿಂದ ರೈತರಿಗೆ ಬೆಳೆ ಸಾಲ ನೀಡಿಲ್ಲ.
ಎಲ್ಲಿಯವರೆಗೆ ಮುತಗಾ ಗ್ರಾಮದ ರೈತರಿಗೆ ಬೆಳೆ ಸಾಲ ಕೊಡುವುದಿಲ್ಲವೋ ಅಲ್ಲಿಯವರೆಗೂ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದರು.
Laxmi News 24×7