Breaking News

ಜ್ಯೂಸಿನಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿನಟಿ ಮೇಲೆ ಅತ್ಯಾಚಾರ

Spread the love

ಬೆಂಗಳೂರು: ಜ್ಯೂಸಿನಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿ ಕುಡಿಸಿ ಸ್ಯಾಂಡಲ್‍ವುಡ್ ನಟಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಆರೋಪಿಯನ್ನು ಮೋಹಿತ್ ಎಂದು ಗುರುತಿಸಲಾಗಿದೆ. ಈತ ಖಾಸಗಿ ಕಂಪನಿಯಲ್ಲಿ ಸಿಇಒ ಆಗಿ ಕೆಲಸ ಮಾಡುತ್ತಿದ್ದು, ಅತ್ಯಾಚಾರ ಎಸಗಿದ್ದಾನೆ ಎಂದು ನಟಿ ಆರೋಪ ಮಾಡುತ್ತಿದ್ದಾರೆ.

ಏನಿದು ಪ್ರಕರಣ?
ಮೋಹಿತ್ ಮತ್ತು ನಟಿ ಕಳೆದ ವರ್ಷ ರೆಸ್ಟೋರೆಂಟ್‍ನಲ್ಲಿ ಪರಿಚಯವಾಗಿದ್ದರು. ಆರೋಪಿ ಮೋಹಿತ್ ತನ್ನ ಕಂಪನಿ ಬ್ರಾಂಡ್ ಅಂಬಾಸಿಡರ್ ಮಾಡುವುದಾಗಿ ನಟಿಯನ್ನು ಪರಿಚಯ ಮಾಡಿಕೊಂಡಿದ್ದನು. ಪರಿಚಯ ಸ್ನೇಹವಾಗಿ ಮೋಹಿತ್ ನಟಿಯ ಜೊತೆ ಸಲುಗೆ ಬೆಳೆಸಿದ್ದನು. ನಂತರ ಆರೋಪಿ ಮೋಹಿತ್ ನಟಿಯ ಹುಟ್ಟುಹಬ್ಬವನ್ನು ತನ್ನ ಮನೆಯಲ್ಲೇ ಆಯೋಜನೆ ಮಾಡಿದ್ದನು.

ಈ ವೇಳೆ ನಟಿಗೆ ಜ್ಯೂಸಿನಲ್ಲಿ ಮತ್ತು ಬರುವ ಮಾತ್ರೆ ಹಾಕಿ ಮಿಕ್ಸ್ ಮಾಡಿದ್ದಾನೆ. ಅದನ್ನು ಕುಡಿದ ನಟಿ ಪ್ರಜ್ಞೆ ತಪ್ಪಿದ್ದು, ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮರುದಿನ ಬೆಳಗ್ಗೆ ನಟಿಗೆ ನಿನ್ನನ್ನು ಅತ್ಯಾಚಾರ ಮಾಡಿರುವುದಾಗಿ ಆರೋಪಿ ಮೋಹಿತ್ ತಿಳಿಸಿ ಬೆದರಿಕೆ ಹಾಕಿದ್ದಾನೆ.

ಆರೋಪಿ ಮೋಹಿತ್, ಮೊಬೈಲ್‍ನಲ್ಲಿ ಎಲ್ಲಾವೂ ರೆಕಾರ್ಡ್ ಆಗಿದೆ. ನಾನು ಹೇಳಿದಂತೆ ಕೇಳಬೇಕು ಎಂದು ಬೆದರಿಕೆ ಹಾಕಿದ್ದನು. ಅಷ್ಟೇ ಅಲ್ಲದೇ ಮೊಬೈಲ್ ತೋರಿಸಿ ಮತ್ತೆ ಅತ್ಯಾಚಾರ ಮಾಡಿದ್ದಾನೆ. ಕೇವಲ ಅತ್ಯಾಚಾರ ಅಷ್ಟೇ ಅಲ್ಲ. ವಿಡಿಯೋವನ್ನು ಯೂಟ್ಯೂಬ್‍ಗೆ ಹಾಕುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾನೆ. ಇದೇ ರೀತಿ ಬೆದರಿಕೆ ಹಾಕಿ ಸುಮಾರು 20 ಲಕ್ಷ ಹಣ ವಸೂಲಿ ಮಾಡಿದ್ದಾನೆ ಎಂದು ನಟಿ ದೂರಿನಲ್ಲಿ ಆರೋಪಿಸಿದ್ದಾರೆ.

ಆರೋಪಿ ಮೋಹಿತ್ ಈಗಲೂ ವಿಡಿಯೋ ತೋರಿಸಿ ಬ್ಲಾಕ್‍ಮೇಲ್ ಮಾಡುತ್ತಿದ್ದಾನೆ ಎಂದು ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ನಟಿ ದೂರು ದಾಖಲಿಸಿದ್ದಾರೆ. ನಟಿ ದೂರು ನೀಡಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

SIR ಬಗ್ಗೆ ಚುನಾವಣಾ ಆಯೋಗದಲ್ಲಿ ಭಿನ್ನಮತವಿಲ್ಲ, ಎಲ್ಲಾ ನಿರ್ಧಾರಗಳೂ ಸರ್ವಾನುಮತದಿಂದ ಕೂಡಿವೆ: ಆಯೋಗ ಸ್ಪಷ್ಟನೆ

Spread the loveನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ಬಗ್ಗೆ ಚುನಾವಣಾ ಆಯೋಗದಲ್ಲಿ ಯಾವುದೇ ಭಿನ್ನಮತ ಇಲ್ಲ, ಎಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ