Breaking News

ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಪೂರ್ವಭಾವಿ ಸಭೆ

Spread the love

ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದೆ.

ಶ್ರೀ ಅಪ್ಪಣಗೌಡ ಪಾಟೀಲ ಅವರ ದೂರದೃಷ್ಟಿಯ ಪರಿಣಾಮವಾಗಿ ಆರಂಭವಾದ ಈ ಸಹಕಾರಿ ಸಂಘವು, ರೈತರ ಹಾಗೂ ಸಾಮಾನ್ಯ ಜನರ ಬೆಳವಣಿಗೆಗಾಗಿ ಸದಾ ಶ್ರಮಿಸಿರುವ ಸಂಸ್ಥೆಯಾಗಿದೆ. ಇಂತಹ ಸಂಸ್ಥೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮುಂಬರುವ ಈ ಚುನಾವಣೆ ಆ ದಿಸೆಯಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದಲೇ ನಾಳೆಯಿಂದ ಪ್ರಚಾರ ಪ್ರಾರಂಭಿಸಿ, ಶ್ರಮವಹಿಸಿ ಈ ಸಂಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ನಿಜವಾದ ಶಕ್ತಿ ನಮ್ಮ ಒಗ್ಗಟ್ಟಿನಲ್ಲಿ ಮತ್ತು ಕಾರ್ಯಸಾಧನೆಗಳಲ್ಲಿ ಅಡಗಿದೆ. ಜನರ ಹಿತಕ್ಕಾಗಿ ಕೆಲಸ ಮಾಡಿದ ಈ ಸಹಕಾರಿ ಸಂಘವನ್ನು ಉಳಿಸಿ ಕಾಪಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ.

ಈ‌ ಸಂದರ್ಭದಲ್ಲಿ ಸಹಕಾರಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ