ಬೆಂಗಳೂರು : ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಕಾರಣ ಈಗ ಸರ್ಕಾರವೇ ಮುಂದೆ ಬಂದು ಮಾರ್ಗೋಪಾಯಗಳನ್ನು ಕಂಡು ಹಿಡಿಯುತ್ತಿದೆ.
ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ ಈಗ ಕರೋನಾ ಚಿಕಿತ್ಸೆ ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಕೇಂದ್ರದಲ್ಲಿ ಮಕ್ಕಳು ಹಾಗೂ ಅಗತ್ಯವುಳ್ಳವರಿಗೆ ತುರ್ತು ಚಿಕಿತ್ಸೆ ನೀಡಲು ಇದನ್ನು ಬಳಸಲಾಗುತ್ತಿದೆ ಮತ್ತು ಚಿಕಿತ್ಸೆ ನೀಡುವ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳಿಗೆ ವಿಶೇಷ ಒತ್ತು ನೀಡಿ ಅವರ ಆರೋಗ್ಯವನ್ನು ಕೂಡ ಕಾಪಾಡುವ ವ್ಯವಸ್ಥೆ ಮಾಡಲಾಗಿದೆ.
ಇದೇ ರೀತಿ ಬಿಬಿಎಂಪಿ ಇನ್ನೂ ಹಲವು ಕ್ರೀಡಾಂಗಣಗಳನ್ನು ಆಸ್ಪತ್ರೆಗಳಾಗಿ ಮಾರ್ಪಡಿಸಲು ಮುಂದಾಗಿದೆ.