ಬೆಳಗಾವಿ :ನಗರದಲ್ಲಿ ಧಾರಾಕಾರ ಮಳೆ ಹಾಗೂ ಗಾಳಿಗೆ ಬೃಹತ್ ಆಕಾರದ ಮರ ಮತ್ತು ಕೊಂಬೆಗಳು ಉರುಳಿ ಬಿದ್ದ ಘಟನೆ ಬುಧವಾರ ಇಲ್ಲಿನ ಕ್ಲಬ್ ರಸ್ತೆಯ ಆದಾಯ ತೆರಿಗೆ ಕಚೇರಿ ಬಳಿ ನಡೆದಿದೆ.
ಕಳೆದ ನಾಲ್ಕೈದು ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಇತ್ತ ಕ್ಲಬ್ ರಸ್ತೆಯಲ್ಲಿ ಬೃಹತ್ ಆಕಾರದ ಮರ ಬಿದ್ದ ಪರಿಣಾಮ ಹನುಮಾನ ನಗರ ಹಾಗೂ ಚನ್ನಮ್ಮ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬಂದಾಗಿದ್ದು ಸಂಚಾರ ಪೊಲೀಸರು ಬ್ಯಾರಿಕೇಡ್ ಹಾಕಿ ವಾಹನಗಳನ್ನು ಬೇರೆ ಕಡೆ ಸಂಚಾರ ನಡೆಸುವಂತೆ ಸೂಚನೆ ನೀಡುತ್ತಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಮರ ತೆರವು ಕಾರ್ಯಚರಣೆ ನಡೆಸಿದ್ದಾರೆ.
Laxmi News 24×7