ಬೋಟ ಮೂಲಕ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ ಇವತ್ತು ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾನದಿಯಲ್ಲಿ ಬೋಟ ಮೂಲಕ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಅವರು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾದ ಕಾರಣ ಬೆಳಗಾವಿ ಜಿಲ್ಲೆಯಲ್ಲಿ ನದಿಗಳ ಒಳಹರಿವು ಹೆಚ್ಚಾಗಿದೆ.
ಇವತ್ತು ಚಿಕ್ಕೋಡಿ ತಾಲೂಕಿನ ಮಾಂಜರಿ ಹಾಗೂ ಯಡೂರ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.ಬಳಿಕ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆಯನ್ನು ನಡೆಸಿ ಪ್ರವಾಹದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅಭಿನವ ಜೈನ್ , ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ,ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ, ತಹಶೀಲ್ದಾರ್ ರಾಜೇಶ ಬುರ್ಲಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.