Breaking News

ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ

Spread the love

ನವದೆಹಲಿ, (ಆಗಸ್ಟ್ 20): ಕರ್ನಾಟಕ ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ ಮೀಟರ್ ಉದ್ದದ ಒಟ್ಟು 93 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಇಂದು (ಆಗಸ್ಟ್ 20) ನಾರಾಯಣಸಾ ಕೆ. ಭಾಂಡ್ಗೆ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಡ್ಡಾ, ಯೋಜನೆಯ ಅವಶ್ಯಕತೆಗಳ ಆಧಾರದ ಮೇಲೆ ಹಣವನ್ನು ಹಂಚಿಕೆ ಮಾಡಲಾಗುತ್ತದೆ ಮತ್ತು ಕೆಲಸದ ಪ್ರಗತಿಗೆ ಅನುಗುಣವಾಗಿ ಬಿಡುಗಡೆ ಮಾಡಲಾಗುತ್ತದೆ ಮತ್ತು ಸಕಾಲಿಕ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಹಣ ಲಭ್ಯವಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ-52 (ಹಳೆಯ ರಾಷ್ಟ್ರೀಯ ಹೆದ್ದಾರಿ -218) ರ ವಿಜಯಪುರ-ಹುಬ್ಬಳ್ಳಿ ವಿಭಾಗದ ಚತುಷ್ಪಥ ರಸ್ತೆಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವುದನ್ನು ಪ್ರಸಕ್ತ ವರ್ಷದ ವಾರ್ಷಿಕ ಯೋಜನೆ 2025-26 ರಲ್ಲಿ ಸೇರಿಸಲಾಗಿದೆ ಎಂದು ಉತ್ತರಿಸಿದರು.

ಇನ್ನು ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಅಂದರೆ ಎನ್‌ ಎಚ್‌ -52, ಎನ್ ಎಚ್ -367, ಎನ್ ಎಚ್ -50 ಮತ್ತು ಎನ್ ಎಚ್ -748ಎ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಮೂಲಕ ಹಾದು ಹೋಗುತ್ತವೆ ಎಂದು ಉತ್ತರಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ