ಚಿತ್ರದುರ್ಗ, ಆಗಸ್ಟ್ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್ಪಿ ಪಿ.ದಿನಕರ್, ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್, ಪಿಎಸ್ಐ ಸುರೇಶ್ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಆರೋಪಿಯ ಪ್ರತಿ ಜಾಡು ಹಿಡಿದು ತನಿಖೆ ಮಾಡಲಾಗುತ್ತಿದೆ. ಈ ಮಧ್ಯೆ ಕಿರಾತಕ ಚೇತನ್ ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲಾಗಿದೆ. ಟಿವಿ9ಗೆ ವರ್ಷಿತಾ ಮತ್ತು ಚೇತನ್ ಜೊತೆಗಿದ್ದ ಕೊನೆ ಕ್ಷಣದ ಸಿಸಿಟಿವಿ ದೃಶ್ಯ ಲಭ್ಯವಾಗಿದೆ.
ಕೊಲೆಗೆ ಸಂಚು ರೂಪಿಸಿದ್ದ ಚೇತನ್
ವರ್ಷಿತಾ ಮತ್ತು ಚೇತನ್ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರಂತೆ. ಇತ್ತೀಚೆಗೆ ಚೇತನ್ಗೆ ಕ್ಯಾನ್ಸರ್ ಇರೋದು ಗೊತ್ತಾಗಿದೆ. ಬಳಿಕ ವರ್ಷಿತಾ ದೂರಾಗಿದ್ದು, ಮತ್ತೊಬ್ಬನನ್ನ ಪ್ರೀತಿಸುತ್ತಿದ್ದಳಂತೆ. ಈ ವಿಷಯ ತಿಳಿದು ಕೆರಳಿದ ಚೇತನ್, ನಯವಾಗಿ ಆಕೆಯನ್ನ ಗೋನೂರು ಬಳಿ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಕತ್ತು ಹಿಸುಕಿ ಕೊಂದಿದ್ದು, ಪೆಟ್ರೋಲ್ ಹಾಕಿ ಶವ ಸುಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ.