Breaking News

ಮಹೇಶ್ ಶೆಟ್ಟಿ ತಿಮರೋಡಿ ಕರೆತರುವಾಗ ಪೊಲೀಸ್​ ಕರ್ತವ್ಯಕ್ಕೆ ಅಡ್ಡಿ; ಮೂವರು ಬೆಂಗಲಿಗರ ಬಂಧನ

Spread the love

ಉಡುಪಿ: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅವರ ಮೂವರು ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ.

ಉಜಿರೆ ನಿವಾಸಿಗಳಾದ ಸೃಜನ್ ಎಲ್., ಹಿತೇಶ್ ಶೆಟ್ಟಿ ಹಾಗೂ ಸಹನ್ ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳು ತಿಮರೋಡಿಯನ್ನು ಹಿಂಬಾಲಿಸಿ, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಬೇಡಿ ಎಂದು ಪೊಲೀಸರು ಸೂಚನೆ ನೀಡಿದರೂ ಕೇಳಿರಲಿಲ್ಲ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ್ಮಾರ್ ಬಳಿ ಕರ್ತವ್ಯಕ್ಕೆ ಅಡ್ಡಿಪಡಿಸುವಂತೆ ತಂಡದಲ್ಲಿದ್ದ ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖೆ ವಾಹನಕ್ಕೆ ಗುದ್ದಿ ಆರೋಪಿಯನ್ನು ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದಂತೆ ಅಡ್ಡಿಪಡಿಸಿದ್ದಾರೆ. ಈ ಕುರಿತಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 132, 121(1), 281, 3(5) ಬಿಎನ್​ಎಸ್ 2023 ಮತ್ತು ಕಲಂ 3 KPDL ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

three-supporters-of-mahesh-shetty-thimarodi-arrested-for-obstructing-police-duty

ಆರೋಪಿಗಳಿಗೆ ನ್ಯಾಯಾಂಗ ಬಂಧನ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಉಜಿರೆ ನಿವಾಸಿಗಳಾದ ಸೃಜನ್ ಎಲ್., ಹಿತೇಶ್ ಶೆಟ್ಟಿ, ಸಹನ್ ಎಂಬವರನ್ನು ಬಂಧಿಸಲಾಗಿದ್ದು. ಮುಂದಿನ ಕ್ರಮಕ್ಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಜೊತೆಗೆ, ಆರೋಪಿಗಳು ಕೃತ್ಯಕ್ಕೆ ಬಳಿಸಿದ KA 70 M3048 ನಂಬರ್​ನ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ